ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಸಂಘಟಿತ ಪ್ರಯತ್ನ: ಕಾಸಿಯಾ ಅಧ್ಯಕ್ಷ ಬಸವರಾಜ ಜವಳಿ

Update: 2019-01-17 17:36 GMT

ಬೆಂಗಳೂರು, ಜ.17: ರಾಜ್ಯವು ಒಳಗೊಂಡಂತೆ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾದ ಕಾನೂನುಗಳನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರಗಳ ಮೇಲೆ ಒತ್ತಡ ತರಲು ಸಂಘಟಿತ ಪ್ರಯತ್ನ ಮಾಡಲಾಗುವುದು ಎಂದು ಕಾಸಿಯಾ ಅಧ್ಯಕ್ಷ ಬಸವರಾಜ ಜವಳಿ ತಿಳಿಸಿದರು.

ಗುರುವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದೊಂದಿಗೆ ನಗರದ ಕಾಸಿಯಾ ಸಭಾಂಗಣದಲ್ಲಿ ಆಯೋಜಿಸಿರುವ ದಕ್ಷಿಣ ಭಾರತದ ಎಂಎಸ್‌ಎಂಇ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಉತ್ತಮ ಮೂಲ ಸೌಕರ್ಯ, ತಂತ್ರಜ್ಞಾನ, ವ್ಯವಸ್ಥಿತ ಮಾರುಕಟ್ಟೆ ಬಗ್ಗೆ ಶೃಂಗಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಎಂಎಸ್‌ಎಂಇ ಹೆಚ್ಚು ಕಾರ್ಮಿಕರನ್ನು ಒಳಗೊಂಡಿರುವುದರಿಂದ ಆರಂಭಿಕ ಹಂತದಲ್ಲಿ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸುವುದರ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಎಂಎಸ್‌ಎಂಇ ಟರ್ನೋವರ್ ನಿಯಮದಡಿ ಸಣ್ಣ ಕೈಗಾರಿಕೆಗಳನ್ನು ವರ್ಗೀಕರಿಸದೆ, ಹೂಡಿಕೆ ಮತ್ತು ಹಣಕಾಸಿನ ಆಧಾರದಲ್ಲಿ ಈ ಸಂಘಗಳನ್ನು ವರ್ಗೀಕರಿಸಬೇಕು. ಸಣ್ಣ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಲು ಫೈನಾನ್ಸ್ ಇನ್‌ಸ್ಟ್ಟಿಟ್ಯೂಟ್‌ಗಳನ್ನು ರಚಿಸುವುದರ ಕುರಿತು ಶೃಂಗಸಭೆಯಲ್ಲಿ ಚರ್ಚೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಈ ವೇಳೆ ಸಂಸದ ಮುದ್ದು ಹನುಮೇಗೌಡ ವಾಣಿಜ್ಯ ಮತ್ತು ಕೈಗಾರಿಕಾ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News