ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಲಿರುವ ಭಾರತದ ಮಹಿಳಾ ತಂಡ

Update: 2019-01-17 18:10 GMT

ಹೊಸದಿಲ್ಲಿ, ಜ.17: ಐಸಿಸಿ ಮಹಿಳಾ ಚಾಂಪಿಯನ್‌ಶಿಪ್‌ನ ಭಾಗವಾಗಿ ಭಾರತ ಮಹಿಳಾ ಕ್ರಿಕೆಟ್ ತಂಡ, ಆಸ್ಟ್ರೇಲಿಯ ವಿರುದ್ಧ 3 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನಾಡಲಿದೆ ಎಂದು ಬಿಸಿಸಿಐ ತಿಳಿಸಿದೆ. ಫೆ.22ರಿಂದ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಗುವಾಹಟಿಯಲ್ಲಿ ಮಾರ್ಚ್ 4ರಿಂದ ಟಿ20 ಸರಣಿ ಆರಂಭವಾಗಲಿದೆ. ಈ ಕುರಿತು ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿರುವ ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ, ‘‘ಬಿಸಿಸಿಐ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿಗಳು ಇಂಗ್ಲೆಂಡ್ ವಿರುದ್ಧ ಮುಂಬರುವ ಸರಣಿಗೆ ವೇಳಾಪಟ್ಟಿಯನ್ನು ಪ್ರಕಟಿಸಿವೆ’’ ಎಂದಿದ್ದಾರೆ.

ಏಕದಿನ ಪಂದ್ಯಗಳು ಭಾರತೀಯ ಕಾಲಮಾನ ಬೆಳಗ್ಗೆ 9 ಗಂಟೆಗೆ ಹಾಗೂ ಟಿ20 ಪಂದ್ಯಗಳು ಬೆಳಗ್ಗೆ 10 ಗಂಟೆಗೆ ಆರಂಭವಾಗಲಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News