ಉಡುಪಿ: ರಾಜ್ಯ ಜೂನಿಯರ್ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್‌ಗೆ ಚಾಲನೆ

Update: 2019-01-18 14:23 GMT

ಉಡುಪಿ, ಜ.18: ಉಡುಪಿ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಹಾಗೂ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಸಹಯೋಗದಲ್ಲಿ ಉಡುಪಿ ಬೀಡಿನಗುಡ್ಡೆಯ ಮಹಾತ್ಮ ಗಾಂಧಿ ಬಯಲು ರಂಗಮಂದಿರ ಮೈದಾನದಲ್ಲಿ ಆಯೋಜಿಸಲಾದ ಬಾಲಕ ಮತ್ತು ಬಾಲಕಿಯರ ಮೂರು ದಿನಗಳ 17ನೆ ಕರ್ನಾಟಕ ರಾಜ್ಯ ಜೂನಿಯರ್ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ ಪಂದ್ಯಾಟಕ್ಕೆ ಇಂದು ಚಾಲನೆ ನೀಡಲಾಯಿತು.

ಪಂದ್ಯಾಟವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾ ರ್ದನ ತೋನ್ಸೆ ಮಾತನಾಡಿ, ಹೆಚ್ಚು ಆಸಕ್ತಿಯ ಕ್ರೀಡೆಯಾಗಿ ಬೆಳೆಯುತ್ತಿರುವ ಹ್ಯಾಂಡ್‌ಬಾಲ್ ಗ್ರಾಮೀಣ ಪ್ರದೇಶಕ್ಕೂ ವಿಸ್ತಾರಗೊಳ್ಳಬೇಕು. ಕ್ರೀಡೆಗಳು ಯುವಕರಿಗೆ ದೈಹಿಕ ಕ್ಷಮತೆ ಜೊತೆ ಸ್ಪೂರ್ತಿಯನ್ನು ನೀಡುತ್ತದೆ. ಪ್ರತಿಯೊಬ್ಬ ರಲ್ಲಿಯೂ ಸ್ಪರ್ಧಾ ಮನೋಭಾವ ಹೆಚ್ಚಾಗಬೇಕು ಎಂದರು.

ಉದ್ಯಮಿಗಳಾದ ಮನೋಹರ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಸಮಾಜ ಸೇವಕ ಸುರೇಶ್ ಶೆಟ್ಟಿ ಗುವೆರ್ು, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮುಖ್ಯ ಅತಿಥಿಗಳಾಗಿದ್ದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್, ವಲಯ ದೈಹಿಕ ಶಿಕ್ಷಣಾಧಿಕಾರಿ ಶೇಖರ್ ಗೌಡ, ರಾಘವೇಂದ್ರ ಸಂಸ್ಥೆಯ ಕಾರ್ಯದರ್ಶಿ ಸೀತಾರಾಮ್ ಗೌಡ, ಕೋಶಾಧಿಕಾರಿ ನಿರುಪಮಾ ಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಸ್ವಾಗತಿಸಿದರು. ಉಪಾಧ್ಯಕ್ಷ ಸುದರ್ಶನ್ ನಾಯಕ್ ವಂದಿಸಿದರು. ಶ್ರೀಕಾಂತ್ ಸಾಮಂತ್ ಕಾರ್ಯಕ್ರಮ ನಿರೂಪಿಸಿದರು. ಪಂದ್ಯಾಟದಲ್ಲಿ 21 ಬಾಲಕರ ಮತ್ತು 12 ಬಾಲಕಿಯರ ತಂಡಗಳು ಭಾಗವಹಿಸಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News