ಅಪರೇಷನ್ ಕಮಲ: ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ

Update: 2019-01-18 14:27 GMT

ಉಡುಪಿ, ಜ.18: ರಾಜ್ಯ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರವನ್ನು ಅಸ್ಥಿರ ಗೊಳಿಸಲು ಪ್ರಯತ್ನಿಸುತ್ತಿರುವ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಬಿಜೆಪಿ ಪಕ್ಷದ ವಿರುದ್ಧ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಶುಕ್ರವಾರ ಅಜ್ಜರ ಕಾಡು ಹುತಾತ್ಮ ಸ್ಮಾರಕದ ಎದುರು ಧರಣಿ ನಡೆಸಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಮಾತನಾಡಿ, ರಾಜ್ಯದಲ್ಲಿ ಬರಗಾಲ ಇದ್ದರೂ ಬಿಜೆಪಿ ಶಾಸಕರು ಕೋಟ್ಯಂತರ ರೂ. ವೆಚ್ಚ ಮಾಡಿ ರೆಸಾರ್ಟ್‌ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಅಧಿಕಾರದಿಂದ ಲಾಲಸೆಯಿಂದ ಸರಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುವ ಬಿಜೆಪಿಗೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ವಾಸುದೇವ ರಾವ್, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ರೋಹಿತ್ ಕರಂಬಳ್ಳಿ, ಮುಖಂಡರಾದ ಗಂಗಾಧರ ಬಿರ್ತಿ, ಶಾಲಿನಿ ಶೆಟ್ಟಿ ಕೆಂಚನೂರು, ಉಮೇಶ್ ಕಲ್ಲೊಟ್ಟೆ, ಜಯರಾಮ್ ಆಚಾರ್ಯ, ಶೇಖರ್ ಕೋಟ್ಯಾನ್, ಇಕ್ಬಾಲ್ ಆತ್ರಾಡಿ, ದಿಲ್‌ಶಾದ್ ಕುಂದಾ ಪುರ, ಜಯಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News