ರಾಜಸ್ಥಾನ ವಿಧಾನಸಭೆಯಲ್ಲಿ ಶೇ.33 ಮಹಿಳಾ ಮೀಸಲಾತಿಗೆ ನಿರ್ಣಯ ಅಂಗೀಕರಿಸಲು ಸಚಿವ ಸಂಪುಟದ ನಿರ್ಧಾರ

Update: 2019-01-18 16:20 GMT

ಜೈಪುರ,ಜ.18: ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಕೋರಿ ನಿರ್ಣಯವೊಂದನ್ನು ಅಂಗೀಕರಿಸಲು ರಾಜ್ಯ ಸಂಪುಟವು ತಾತ್ವಿಕವಾಗಿ ನಿರ್ಧರಿಸಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ಇಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಐದು ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಈ ನಿರ್ಣಯ ಅಂಗೀಕಾರಗೊಳ್ಳಬೇಕು ಎಂದು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯರು ಬಯಸಿದ್ದಾರೆ ಎಂದರು. ಆದರೆ ಹಾಲಿ ವಿಧಾನಸಭಾ ಅಧಿವೇಶನದಲ್ಲಿಯೇ ಈ ನಿರ್ಣಯವನ್ನು ಅಂಗೀಕರಿಸಲಾಗುವುದೇ ಎನ್ನುವುದನ್ನು ಅವರು ತಿಳಿಸಲಿಲ್ಲ.

ಸಂಸತ್ತಿನಲ್ಲಿ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿಗಾಗಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಹೋರಾಟ ನಡೆಸಿದ್ದರು. ಸುದೀರ್ಘ ಹೋರಾಟದ ಬಳಿಕ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದರೂ ರಾಜ್ಯಸಭೆಯಲ್ಲಿ ಬಾಕಿಯಾಗಿದೆ ಎಂದು ಗೆಹ್ಲೋಟ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News