ಬರ ಪರಿಸ್ಥಿತಿ ಹಿನ್ನೆಲೆ: ಮೇ ಅಂತ್ಯದ ವರೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ

Update: 2019-01-18 16:38 GMT

ಬೆಂಗಳೂರು, ಜ. 18: ರಾಜ್ಯದಲ್ಲಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ 2019ರ ಮೇ ಅಂತ್ಯದ ವರೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸೂಚನೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ತನ್ನ ಅಧ್ಯಕ್ಷತೆಯಲ್ಲಿ ನಡೆದ ಬರ ನಿರ್ವಹಣೆ ಸಂಬಂಧಿಸಿದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಮೇಲ್ಕಂಡ ವಿಚಾರಕ್ಕೆ ಸಂಬಂಧಿಸಿದಂತೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಕುಡಿಯುವ ನೀರು ಪೂರೈಕೆ ಸಂಬಂಧಿಸಿದ ಬಿಲ್ಲಿನ ಮೊತ್ತವನ್ನು 15 ದಿನಗಳ ಒಳಗೆ ಪಾವತಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಸಂದರ್ಭದಲ್ಲಿ ಯಾವುದೇ ಅವ್ಯವಹಾರಗಳಿಗೆ ಅಸ್ಪದಸ ನೀಡದಂತೆ ಜಿಲ್ಲಾಡಳಿತ ಕ್ರಮ ವಹಿಸಬೇಕು. ಜಾನುವಾರಗಳಿಗೆ ಕುಡಿಯುವ ನೀರು ಮತ್ತು ಅಗತ್ಯ ಮೇವು ಪೂರೈಕೆ ಮಾಡಬೇಕು ಎಂದು ಸೂಚಿಸಲಾಗಿದೆ.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ, ಆಹಾರ ಸಚಿವ ಝಮೀರ್ ಅಹ್ಮದ್ ಖಾನ್, ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ, ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಂದಾಯ ಇಲಾಖೆ ಗಂಗಾರಾಮ್ ಬಡೇರಿಯಾ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News