ಯುವತಿಯ ಫೋಟೊ ಸೆರೆ ಹಿಡಿದ ಅಪರಿಚಿತರು: ದೂರು

Update: 2019-01-18 16:44 GMT

ಮಂಗಳೂರು, ಜ.18: ತಾಲೂಕಿನ ಉಪ ನೋಂದಣಾಧಿಕಾರಿ ಕಚೇರಿಗೆ ಬಂದಿದ್ದ ಯುವತಿಯೊಬ್ಬರ ಫೋಟೋವನ್ನು ಇಬ್ಬರು ಅಪರಿಚಿತರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಈ ಬಗ್ಗೆ ಮಂಗಳೂರು ದಕ್ಷಿಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಲಸದ ನಿಮಿತ್ತ ಉಪ ನೋಂದಣಾಧಿಕಾರಿ ಕಚೇರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪ್ರವೇಶ ದ್ವಾರ ಪ್ರವೇಶಿಸುತ್ತಿದ್ದಂತಯೇ ಇಬ್ಬರು ಮೊಬೈಲ್‌ ನಲ್ಲಿ ಯುವತಿಯ ಫೋಟೊ ತೆಗೆದಿದ್ದಾರೆ. ಇದನ್ನು ಪ್ರಶ್ನಿಸಿದರೂ, ಲೆಕ್ಕಿಸದೇ ಮತ್ತೆ ಫೋಟೊ ಸೆರೆ ಹಿಡಿದಿದ್ದಾರೆ. ವಿರೋಧ ವ್ಯಕ್ತಪಡಿಸಿದ ಯುವತಿಗೆ, ಈ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News