ಮೈಸೂರು: ಅಪರ ಜಿಲ್ಲಾಧಿಕಾರಿಯಾಗಿ ಬಿ.ಆರ್.ಪೂರ್ಣಿಮ ಅಧಿಕಾರ ಸ್ವೀಕಾರ

Update: 2019-01-18 17:13 GMT

ಮೈಸೂರು,ಜ.18: ಮೈಸೂರಿನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ದಂಡಾಧಿಕಾರಿಯಾಗಿ ಬಿ.ಆರ್.ಪೂರ್ಣಿಮಾ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ ಅವರಿಂದ ಅಧಿಕಾರ ಸ್ವೀಕರಿಸಿದರು. ಈ ಮೊದಲು ಪೂರ್ಣಿಮಾ ಅವರು ಹಾಸನ, ಮಂಡ್ಯದಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಮೂಲತಃ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಸಗರಹಳ್ಳಿ ನಿವಾಸಿ. ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರ ಸೋದರಿ ಎಂದು ಹೇಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News