ಝಾಕಿರ್ ನಾಯ್ಕ್ ರ 16.40 ಕೋ.ರೂ.ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

Update: 2019-01-19 15:28 GMT

ಹೊಸದಿಲ್ಲಿ,ಜ.19: ಧಾರ್ಮಿಕ ವಿದ್ವಾಂಸ ಝಾಕಿರ್ ನಾಯ್ಕ್ ವಿರುದ್ಧದ ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ)ವು ಅಕ್ರಮ ಹಣ ವಹಿವಾಟು ತಡೆ ಕಾಯ್ದೆ(ಪಿಎಂಎಲ್‌ಎ)ಯಡಿ ಮುಂಬೈ ಮತ್ತು ಪುಣೆಯಲ್ಲಿರುವ 16.40 ಕೋ.ರೂ. ಮೌಲ್ಯದ ಆಸ್ತಿಗಳನ್ನು ವಶಪಡಿಸಿಕೊಂಡಿದೆ.

ಇದು ಈ ಪ್ರಕರಣದಲ್ಲಿ ಮೂರನೇ ಆಸ್ತಿ ಸ್ವಾಧೀನವಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಇಡಿ ವಶಪಡಿಸಿಕೊಂಡಿರುವ ಆಸ್ತಿಗಳ ಒಟ್ಟು ವೌಲ್ಯ 50.49 ಕೋ.ರೂ.ಗೇರಿದೆ.

ಹಾಲಿ ಮಲೇಶಿಯಾದಲ್ಲಿರುವುದಾಗಿ ಹೇಳಲಾಗಿರುವ ನಾಯ್ಕ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು ದಾಖಲಿಸಿಕೊಂಡಿರುವ ಎಫ್‌ಐಆರ್‌ನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಪ್ರಕರಣದ ತನಿಖೆಯನ್ನು ನಡೆಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News