ಮಂಗಳೂರು ವಿವಿ ಅಂತರ ಕಾಲೇಜು ಹ್ಯಾಂಡ್‌ಬಾಲ್ ಟೂರ್ನಿ: ಉಜಿರೆ ಎಸ್‌ಡಿಎಂ- ಸೈಂಟ್ ಅಲೋಶಿಯಸ್‌ಗೆ ಪ್ರಶಸ್ತಿ

Update: 2019-01-19 15:03 GMT

ಉಡುಪಿ, ಜ.19: ಉಡುಪಿ ಪೂರ್ಣಪ್ರಜ್ಞಾ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾದ ಎರಡು ದಿನಗಳ ಮಂಗಳೂರು ವಿವಿ ಅಂತರ್ ಕಾಲೇಜು ಹ್ಯಾಂಡ್‌ಬಾಲ್ ಟೂರ್ನಿಯ ಪುರುಷರ ವಿಭಾಗ ದಲ್ಲಿ ಉಜಿರೆಯ ಎಸ್‌ಡಿಎಂ ಕಾಲೇಜು ಹಾಗೂ ಮಹಿಳೆಯರ ವಿಭಾಗದಲ್ಲಿ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜು ತಂಡಗಳು ಅಗ್ರಪ್ರಶಸ್ತಿ ಯನ್ನು ಗೆದ್ದುಕೊಂಡವು.

ಶನಿವಾರ ನಡೆದ ಪುರುಷರ ಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ತಂಡ, ಎದುರಾಳಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ತಂಡವನ್ನು 27-23 ಹಾಗೂ ಮಹಿಳೆಯರ ಅಂತಿಮ ಪಂದ್ಯದಲ್ಲಿ ಅಲೋಶಿಯಸ್ ತಂಡ ಪ್ರತಿಸ್ಪರ್ಧಿ ಮೂಡುಬಿದಿರೆಯ ಆಳ್ವಾಸ್ ಕಾಲೇಜು ತಂಡವನ್ನು 14-09 ಅಂಕಗಳ ಅಂತರ ದಿಂದ ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡವು.

ಮಹಿಳಾ ವಿಭಾಗದಲ್ಲಿ ಆಳ್ವಾಸ್ ದ್ವಿತೀಯ, ನಿಟ್ಟೆ ಡಾ.ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜು ತೃತೀಯ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಚತುರ್ಥ ಮತ್ತು ಪುರುಷ ವಿಭಾಗದಲ್ಲಿ ಆಳ್ವಾಸ್ ದ್ವಿತೀಯ, ಮಂಗಳೂರು ವಿವಿ ಕ್ಯಾಂಪಸ್ ತೃತೀಯ, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಚತುರ್ಥ ಸ್ಥಾನಗಳನ್ನು ಪಡೆದುಕೊಂಡವು.

ಮಹಿಳಾ ವಿಭಾಗದಲ್ಲಿ ಬೆಸ್ಟ್ ಗೋಲ್‌ಕೀಪರ್ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಶಾಂಭವಿ, ಆಲ್‌ರೌಂಡರ್ ಆಳ್ವಾಸ್‌ನ ರೂಸ್ಲಿ, ಬೆಸ್ಟ್ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಅಲೋಸಿಯಸ್‌ನ ತ್ರಿಮಲ್ ಮತ್ತು ಪುರುಷರ ವಿಭಾಗದಲ್ಲಿ ಬೆಸ್ಟ್ ಗೋಲ್‌ಕೀಪರ್ ಆಳ್ವಾಸ್‌ನ ಕಿರಣ್, ಆಲ್ ರೌಂಡರ್ ಮಂಗಳೂರು ವಿವಿ ಕ್ಯಾಂಪಸ್‌ನ ಸದ್ದಾಂ ಹುಸೇನ್, ಬೆಸ್ಟ್ ಪ್ಲೇಯರ್ ಆಫ್ ಟೂರ್ನಮೆಂಟ್ ಪ್ರಶಸ್ತಿಯನ್ನು ಉಜಿರೆ ಎಸ್‌ಡಿಎಂನ ನಿತೀನ್ ತಮ್ಮದಾ ಗಿಸಿಕೊಂಡರು.

ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹು ಮಾನ ವಿತರಿಸಿದ ಉಡುಪಿ ಶ್ರೀಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷ ಶ್ರೀವಿಶ್ವಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ಸೋಲು ಗೆಲುವು ಏಕಾಕಲದಲ್ಲಿ ಎರಡು ತಂಡಕ್ಕೆ ಸಿಗದಿದ್ದರೂ ಆರೋಗ್ಯ ಮಾತ್ರ ಎಲ್ಲರಿಗೂ ದೊರೆಯುತ್ತದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಿಂದ ಮಾತ್ರ ಸರ್ವಾಂಗೀಣ ಪ್ರಗತಿ ಸಾಧ್ಯ ಎಂದರು.

ಕಾಲೇಜಿನ ಆಡಳಿತ ಮಂಡಳಿಯ ಗೌರವ ಕೋಶಾಧಿಕಾರಿ ಪ್ರದೀಪ್ ಕುಮಾರ್, ಮಂಗಳೂರು ವಿವಿಯ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಕಿಶೋರ್ ಕುಮಾರ್ ಸಿ.ಕೆ. ಮಾತನಾಡಿದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ವಹಿಸಿದ್ದರು.

ಕಾಲೇಜಿನ ಉಪಪ್ರಾಂಶುಪಾಲ ಡಾ.ಎ.ಪಿ.ಭಟ್, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್ ಉಪ ಸ್ಥಿತರಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ.ಟಿ.ಎಸ್.ರಮೇಶ್ ಸ್ವಾಗತಿಸಿ ದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಜಯಲಕ್ಷ್ಮೀ ವಂದಿಸಿದರು. ಕನ್ನಡ ಉಪನ್ಯಾಸಕ ಮಂಜುನಾಥ ಕರಬ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News