ರಾಷ್ಟ್ರ ಧ್ವಜಕ್ಕೆ ಅಗೌರವ: ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲು ನ್ಯಾಯಾಲಯ ಅನುಮತಿ

Update: 2019-01-19 16:15 GMT

ಸಾಗರ್, ಜ. 19: 2014 ಜನವರಿಯಲ್ಲಿ ನಡೆದ ರ್ಯಾಲಿಯ ಸಂದರ್ಭ ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿಸಿದ ಆರೋಪದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಎಎಪಿ ಕಾರ್ಯಕರ್ತರ ವಿರುದ್ಧ ಪ್ರಥಮ ಮಾಹಿತಿ ವರದಿ ದಾಖಲಿಸಲು ಸಾಗರ್‌ನಲ್ಲಿರುವ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ.

ಸಾಗರ್, ಬಿನಾ, ಖುರಾಯಿ ಹಾಗೂ ದಿಲ್ಲಿಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯವಾದಿ ರಾಜೇಂದ್ರ ಮಿಶ್ರಾ 2015ರಲ್ಲಿ ದಾಖಲಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಈ ನಿರ್ದೇಶನ ನೀಡಿದೆ. 2014ರ ಸಾರ್ವತ್ರಿಕ ಚುನಾವಣೆಯ ಪ್ರಚಾರದ ಸಂದರ್ಭ ಕೇಜ್ರಿವಾಲ್ ಹಾಗೂ ಆಪ್ ಕಾರ್ಯಕರ್ತರು ರಾಷ್ಟ್ರಧ್ವಜದೊಂದಿಗೆ ಅವರ ಪಕ್ಷದ ಚಿಹ್ನೆಯಾದ ಪೊರಕೆಯನ್ನು ಒಯ್ದಿದ್ದಾರೆ. ಎಂದು ರಾಜೇಂದ್ರ ಮಿಶ್ರಾ ದೂರಿನಲ್ಲಿ ಆರೋಪಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News