ಉಡುಪಿ: ಮಕ್ಕಳಿಂದ ಅಹವಾಲು ಸ್ವೀಕಾರ

Update: 2019-01-19 16:30 GMT

ಉಡುಪಿ, ಜ.19: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆ ಕುರಿತು ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮವು ಜ.21ರ ಬೆಳಗ್ಗೆ 10 ಗಂಟೆಗೆ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ಎನ್. ತೊರವಿ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರ್ರಾನ್ಸಿಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News