ಬೆಂಗಳೂರು: ಮನೆಗಳ್ಳತನ ಪ್ರಕರಣ; ಓರ್ವನ ಬಂಧನ

Update: 2019-01-19 16:37 GMT

ಬೆಂಗಳೂರು, ಜ.19: ತಳ್ಳುವ ಗಾಡಿಯಲ್ಲಿ ತರಕಾರಿ ಮಾರುತ್ತ, ಬೀಗ ಹಾಕಿದ ಮನೆಗಳನ್ನು ಗುರುತಿಸಿ, ರಾತ್ರಿ ವೇಳೆ ನುಗ್ಗಿ ಕಳವು ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೋರ್ವನನ್ನು ಇಲ್ಲಿನ ಮಹಾಲಕ್ಷ್ಮೀ ಲೇಔಟ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುರುಬರಹಳ್ಳಿಯ ಮಂಜುನಾಥ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನಿಂದ 8 ಲಕ್ಷ ರೂ. ಮೌಲ್ಯದ 250 ಗ್ರಾಂ ಚಿನ್ನ, ಒಂದು ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಚೇತನ್ ಸಿಂಗ್ ರಾಥೋರ್ ತಿಳಿಸಿದ್ದಾರೆ.

ಆರೋಪಿಯು ಈ ಹಿಂದೆ ಚಾಮರಾಜಪೇಟೆ, ಹುಳಿಮಾವು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮನೆಗಳವು ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದು, ಜೈಲು ಶಿಕ್ಷೆ ಅನುಭವಿಸಿ, 8 ತಿಂಗಳ ಹಿಂದೆ ಬಿಡುಗಡೆಯಾಗಿ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾಲಕ್ಷ್ಮೀ ಲೇಔಟ್, ನಂದಿನಿ ಲೇಔಟ್, ಇನ್ನಿತರ ಕಡೆಗಳಲ್ಲಿ ಬೆಳಗಿನ ವೇಳೆ ತಳ್ಳುವ ಗಾಡಿಯಲ್ಲಿ ತರಕಾರಿ ಮಾರುತ್ತ, ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಬೆಳಗ್ಗೆ 11 ರಿಂದ ಮಧ್ಯಾಹ್ನ 2ರ ಮಧ್ಯೆ ಜನಸಂದಣಿ ಕಡಿಮೆ ಇರುವುದನ್ನು ಗಮನಿಸಿ ಬೀಗ ಮುರಿದು ಒಂಟಿಯಾಗಿ ಕಳವು ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News