ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್ ಭಾವಚಿತ್ರ ಇಡುವಂತೆ ಆಗ್ರಹ

Update: 2019-01-19 16:41 GMT

ಬೆಂಗಳೂರು, ಜ.19: ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರವನ್ನು ಇಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರ ಆದೇಶ ಹೊರಡಿಸಬೇಕೆಂದು ನವ ಭಾರತ್ ಸೋಷಿಯಲ್ ಜಸ್ಟಿಸ್ ಕೌನ್ಸಿಲ್ ಆಗ್ರಹಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೌನ್ಸಿಲ್‌ನ ರಾಜ್ಯ ಘಟಕದ ಅಧ್ಯಕ್ಷ ಅನಂತರಾಯಪ್ಪ, ಸರಕಾರಿ ಕಚೇರಿಗಳಲ್ಲಿ, ಶಾಲಾ-ಕಾಲೇಜುಗಳಲ್ಲಿ, ಕಾರ್ಪೋರೇಟ್ ಕಂಪನೆಗಳಲ್ಲೂ ಗಣರಾಜ್ಯೋತ್ಸವವನ್ನು ರಾಷ್ಟ್ರೀಯ ಹಬ್ಬವಾಗಿ ಅದ್ದೂರಿಯಿಂದ ಆಚರಿಸುತ್ತಾರೆ. ಆದರೆ, ಈ ಸಮಾರಂಭಗಳಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರವನ್ನು ಮಾತ್ರ ಇಡಲಾಗುತ್ತದೆ. ಸಂವಿಧಾನ ರಚಿಸಿದ ಡಾ.ಬಿ.ಆರ್.ಅಂಬೇಡ್ಕರ್‌ರವರ ಭಾವಚಿತ್ರವನ್ನು ಬಹುತೇಕ ಕಡೆಗಳಲ್ಲಿ ಇಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಗಾಂಧೀಜಿಯ ಭಾವಚಿತ್ರದ ಜೊತೆಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‌ರವರ ಭಾವಚಿತ್ರವನ್ನೂ ಕೂಡ ಖಡ್ಡಾಯವಾಗಿ ಇಡುವಂತೆ ಸರಕಾರಿ ಆದೇಶವನ್ನು ಹೊರಡಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿಯನ್ನು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ಮೂಲಕ ಒತ್ತಾಯಿಸುತ್ತೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News