ಕಾಂಗ್ರೆಸ್ ಆಡಳಿತಾರೂಢ ರಾಜ್ಯಗಳಲ್ಲಿ ಶೇ. 33 ಮೀಸಲಾತಿ ಅನುಷ್ಠಾನಕ್ಕೆ ಯತ್ನ: ಸಚಿನ್ ಪೈಲಟ್

Update: 2019-01-19 17:35 GMT

ಜೈಪುರ, ಜ. 19: ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಮಹಿಳೆಯರಿಗೆ ಸೇ. 33 ಮೀಸಲಾತಿ ಆಗ್ರಹವನ್ನು ಜಾರಿಗೆ ಕಾಂಗ್ರೆಸ್ ಪ್ರಯತ್ನಿಸಲಿದೆ. ಇದನ್ನು ದೇಶಾದ್ಯಂತ ಜಾರಿಗೊಳಿಸಲು ಸಾಧ್ಯವಾಗದೇ ಇದ್ದರೂ ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಾಗುವುದು ಎಂದು ರಾಜಸ್ಥಾನದ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪೈಲಟ್, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಲೋಕಸಭೆ ಹಾಗೂ ವಿಧಾನ ಸಭೆಯಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುವುದಾಗಿ ಭರವಸೆ ನೀಡಿತ್ತು. ಈ ದಿಶೆಯಲ್ಲಿ ಹೆಜ್ಜೆ ಇರಿಸುವುದು ಹೇಗೆಂದು ನಾವು ಚಿಂತಿಸುತ್ತಿದ್ದೇವೆ. ದೇಶಾದ್ಯಂತ ಸಾಧ್ಯವಾಗದೇ ಇದ್ದರೂ ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸಲಿದ್ದೇವೆ ಎಂದು ಅವರು ಹೇಳಿದರು. ಈ ವಿಷಯದ ಕುರಿತು ಸೂಕ್ತ ಕ್ರಮ ಕೈಗೊಳ್ಳದಿರುವ ಕೇಂದ್ರ ಸರಕಾರವನ್ನು ಟೀಕಿಸಿದ ಅವರು, ಬಿಜೆಪಿ ಸರಕಾರ ಐದು ವರ್ಷಗಳಲ್ಲಿ ಹಲವು ಸಾಂವಿಧಾನಿಕ ತಿದ್ದುಪಡಿಗಳನ್ನು ತಂದಿದೆ. ಆದರೆ, ಈ ವಿಷಯದಲ್ಲಿ ಮಾತ್ರ ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದರು.

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಳೆದ ಐದು ವರ್ಷಗಳಿಂದ ಈ ವಿಷಯಕ್ಕೆ ಸಂಬಂಧಿಸಿ ಕೇಂದ್ರಕ್ಕೆ ಪತ್ರ ಬರೆಯುತ್ತಿದ್ದಾರೆ. ಆದರೆ, ಅವರು ಅನುಷ್ಠಾನ ಗೊಳಿಸುತ್ತಿಲ್ಲ. ಯಾಕೆಂದರೆ ಅವರು ಎಂದಿಗೂ ಈ ಉದ್ದೇಶ ಹೊಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News