-0.7 ಡಿಗ್ರಿ ಚಳಿಯಲ್ಲಿ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

Update: 2019-01-20 12:05 GMT

ಜಮ್ಮು ಕಾಶ್ಮೀರ, ಜ.20: ಆಸ್ಪತ್ರೆಯ ವೈದ್ಯರು ದಾಖಲಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು -0.7 ಡಿಗ್ರಿ ಚಳಿಯಲ್ಲಿ ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ರಾಜ್ಯಾದ್ಯಂತ ಭಾರೀ ವಿವಾದ ಸೃಷ್ಟಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ವೈದ್ಯರನ್ನು ವಜಾಗೊಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಜಮ್ಮು ಕಾಶ್ಮೀರ ಸರಕಾರ ಆದೇಶಿಸಿದೆ.

ಸುಮಾರು 130 ಕಿ.ಮೀ. ಕ್ರಮಿಸಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆತಂದರೂ ವೈದ್ಯರು ನಿಂದಿಸಿದ್ದಾರೆ, ಆಕ್ಷೇಪಾರ್ಹ ಪದಬಳಕೆ ಮಾಡಿದ್ದಾರೆ ಹಾಗು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಮಹಿಳೆಯ ಕುಟುಂಬಸ್ಥರು ಮಾಧ್ಯಮಗಳಲ್ಲಿ ದೂರಿದ್ದರು. ಆನಂತರ ಈ ಸುದ್ದಿ ಭಾರೀ ವಿವಾದ ಸೃಷ್ಟಿಸಿತ್ತು.

ಮೂರಿ ಎಂಬಲ್ಲಿನ ನಿವಾಸಿ ಸುರಯ್ಯಾ ಬೇಗಂರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆನಂತರ ಅವರನ್ನು ಅವರ ಪತಿ ವಝೀರ್ ಅಹ್ಮದ್ ಮತ್ತು ಸಂಬಂಧಿಕರು ಆಸ್ಪತ್ರೆಗೆ ಸಾಗಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News