ರಾಜ್ಯ ಜ್ಯೂನಿಯರ್ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್: ಮಂಡ್ಯ -ಕೊಡಗು ತಂಡಗಳಿಗೆ ಚಾಂಪಿಯನ್ ಪ್ರಶಸ್ತಿ

Update: 2019-01-20 16:46 GMT

ಉಡುಪಿ, ಜ.20: ಉಡುಪಿ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಹಾಗೂ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಸಹಯೋಗ ದಲ್ಲಿ ಉಡುಪಿ ಬೀಡಿನಗುಡ್ಡೆಯ ಮಹಾತ್ಮಗಾಂಧಿ ಬಯಲು ರಂಗಮಂದಿರ ಮೈದಾನದಲ್ಲಿ ಏರ್ಪಡಿಸಲಾದ ಮೂರು ದಿನಗಳ 17ನೆ ಕರ್ನಾಟಕ ರಾಜ್ಯ ಜ್ಯೂನಿಯರ್ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ ಟೂರ್ನಮೆಂಟ್ನ ಬಾಲಕರ ವಿಭಾಗದಲ್ಲಿ ಮಂಡ್ಯ ಹಾಗೂ ಬಾಲಕಿಯರ ವಿಭಾಗದಲ್ಲಿ ಕೊಡಗು ಕೆಎಲ್ಇ ತಂ ಡಗಳು ಪ್ರಶಸ್ತಿ ಗೆದ್ದುಗೊಂಡಿವೆ.

ಬಾಲಕರ ವಿಭಾಗದಲ್ಲಿ ಉಡುಪಿ ದ್ವಿತೀಯ, ಎಎಚ್‌ಇ ಮೈಸೂರು ತಂಡ ತೃತೀಯ ಹಾಗೂ ಬಾಲಕಿಯರ ವಿಭಾಗದಲ್ಲಿ ಗೋಕಾಕ್ ದ್ವಿತೀಯ, ಬಿಎಂ ಎಸ್‌ಸಿಎಡ್ಲ್ಯೂ ಬೆಂಗಳೂರು ತೃತೀಯ ಸ್ಥಾನ ಪಡೆದುಕೊಂಡಿದೆ. ರವಿವಾರ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಗಳಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಗೌರವ ಕಾರ್ಯದರ್ಶಿ ಎಂ.ಕೆ.ನಾಗೇಂದ್ರ ಅವರನ್ನು ಗೌರವಿಸಲಾಯಿತು. ಉಡುಪಿ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಸ್.ಮಧುಕರ್, ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಶನ್ನ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಉಪಕಾರ್ಯದರ್ಶಿ ಬಿ.ಎಲ್.ಲೋಕೇಶ್, ಉದ್ಯಮಿ ಕಿಶನ್ ಹೆಗ್ಡೆ ಕೊಳ್ಕೆಬೈಲ್, ನಗರಸಭಾ ರಮೇಶ್ ಕಾಂಚನ್, ಮಾಜಿ ಜಿಪಂ ಸದಸ್ಯ ದಿವಾಕರ ಕುಂದರ್ ಮುಖ್ಯ ಅತಿಥಿಗಳಾಗಿದ್ದರು.

ವೇದಿಕೆಯಲ್ಲಿ ಇಂದು ರಮಾನಂದ ಭಟ್, ಅಸೋಸಿಯೇಶನ್ ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಗೌಡ, ಕೋಶಾಧಿಕಾರಿ ನಿರುಪಮಾ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ರೋಹಿತ್ ಆರ್. ದೇವಾ ಡಿಗ ವಿಜೇತರ ಪಟ್ಟಿ ವಾಚಿಸಿದರು. ಉಡುಪಿ ಜಿಲ್ಲಾ ಹ್ಯಾಂಡ್‌ಬಾಲ್ ಅಸೋಸಿಯೇಶನ್ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಸುದರ್ಶನ್ ನಾಯಕ್ ವಂದಿಸಿದರು. ಗೋಪಾಲ ಶೆಟ್ಟಿ ಮಲ್ಪೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News