ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಲಿ: ಸೊರಕೆ

Update: 2019-01-20 16:56 GMT

ಉಡುಪಿ, ಜ.20: ತುಳು ಪ್ರೀತಿಯ ಭಾಷೆಯಾಗಿದೆ. ಬೇರೆ ಬೇರೆ ಭಾಷೆ ಯನ್ನು ತುಲನೆ ಮಾಡಿದಾಗ ತುಳು ಭಾಷೆ ಕ್ಷೀಣ ಆಗುತ್ತಿರುವಂತೆ ಭಾಸ ವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ತುಳು ಸಂಸ್ಕೃತಿ ಸಂಸ್ಕಾರಗಳನ್ನು ಯುವ ಪೀಳಿಗೆಗೆ ತಿಳಿಸುವ ಕಾರ್ಯ ನಡೆಯುತ್ತಿದೆ. ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಬೇಕಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.

ಉಡುಪಿ ತುಳುಕೂಟದ ವತಿಯಿಂದ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ರವಿವಾರ ಆಯೋಜಿಸಲಾದ ಕೆಮ್ತೂರು ತುಳು ನಾಟಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ತುಳುಕೂಟದ ಅಧ್ಯಕ್ಷ ವಿ.ಜಿ.ಶೆಟ್ಟಿ ವಹಿಸಿದ್ದರು. ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ನ ಆಡಳಿತಾಧಿಕಾರಿ ಡಾ.ಎಚ್. ಶಾಂತಾರಾಮ್, ಉದ್ಯಮಿಗಳಾದ ಪುರುಷೋತ್ತಮ ಶೆಟ್ಟಿ, ಮನೋರ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ವೇದಿಕೆಯಲ್ಲಿ ತುಳುಕೂಟದ ಸ್ಥಾಪಕ ಅಧ್ಯಕ್ಷ ಭಾಸ್ಕರನಂದ ಕುಮಾರ್, ಕೆವ್ತೂರು ಕುಟುಂಬದ ಅಶೋಕ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಗಂಗಾಧರ ಕಿದಿಯೂರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಂಗಾಧರ ಕಿದಿಯೂರು ರಚಿಸಿರುವ ಬಗ್ಗನ ಭಾಗ್ಯ ನಾಟಕದ ಸಿಡಿ ಬಿಡುಗಡೆಗೊಳಿಸಲಾಯಿತು.

ತುಳುಕೂಟದ ಗೌರವಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ನಾಟಕ ಸ್ಪರ್ಧೆಯ ಸಂಚಾಲಕ ಪ್ರಭಾಕರ ಭಂಡಾರಿ ಪ್ರಾಸ್ತಾವಿಕವಾಗಿ ಮಾತ ನಾಡಿದರು. ಮೋಹನ್ ಶೆಟ್ಟಿ ಬಹುಮಾನಿತರ ಪಟ್ಟಿ ವಾಚಿಸಿದರು. ನಾಗರಾಜ್ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಕೆಮ್ತೂರು ತುಳು ನಾಟಕ ಪ್ರಶಸ್ತಿ ವಿಜೇತ ಮಣಿಪಾಲ ಸಂಗಮ್ ಕಲಾವಿದೆರ್ ತಂಡದ ‘ರಕ್ಕಸ- ತಂಗಡಿ’ ನಾಟಕದ ಮರು ಪ್ರದರ್ಶನ ನಡೆ ಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News