ಬೆಂಗಳೂರು: ಚಿನ್ನ ಸಾಗಿಸುತ್ತಿದ್ದ ಮೂವರು ಮಹಿಳೆಯರು ಸೇರಿ ನಾಲ್ವರ ಬಂಧನ

Update: 2019-01-20 18:12 GMT

ಬೆಂಗಳೂರು, ಜ.20: ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು, ಚಿನ್ನ ಸಾಗಿಸುತ್ತಿದ್ದ ಮೂವರು ಮಹಿಳೆಯರು ಸೇರಿ ನಾಲ್ವರನ್ನು ಬಂಧಿಸಿ 700 ಗ್ರಾಂ ಚಿನ್ನ ಜಪ್ತಿ ಮಾಡಿದ್ದಾರೆ.

ಶ್ರೀಲಂಕಾದ ಕೊಲೊಂಬೊ ಏರ್‌ಲೈನ್‌ನಲ್ಲಿ ಪ್ರಯಾಣಿಸುತ್ತಿದ್ದ ತಮಿಳುನಾಡಿನ 3 ಮಹಿಳೆಯರನ್ನು ಅನುಮಾನದ ಮೇಲೆ ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು, ಪರೀಕ್ಷಿಸಿದಾಗ 496 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡಿರುವುದು ಪತ್ತೆಯಾಗಿದೆ.

ಇನ್ನೂಂದು ಪ್ರಕರಣದಲ್ಲಿ ಆಂಧ್ರ ಮೂಲದ ವ್ಯಕ್ತಿಯೊಬ್ಬ 200 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ತಪಾಸಣೆ ನಡೆಸಿ ಬಂಧಿಸಲಾಗಿದ್ದು, ಇವರಿಂದ ಒಟ್ಟು 23.19 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News