ಅಂಬಲಪಾಡಿ ಯಕ್ಷಗಾನ ಕಲಾಮಂಡಳಿಯ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Update: 2019-01-21 14:04 GMT

ಉಡುಪಿ, ಜ. 21: 60 ವರ್ಷಗಳಿಂದ ನಿರಂತರ ಯಕ್ಷಗಾನ ಸಂಬಂಧಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ಅಂಬಲಪಾಡಿ ಶ್ರೀಲಕ್ಷ್ಮೀಜನಾ ರ್ದನ ಯಕ್ಷಗಾನ ಕಲಾಮಂಡಳಿಯ ನೂತನ ಕಟ್ಟಡದ ಶಿಲಾನ್ಯಾಸವು ಅಂಬಲ ಪಾಡಿ ಸಮೀಪದ ಕಂಬಳಕಟ್ಟದಲ್ಲಿ ಶನಿವಾರ ನೆರವೇರಿತು.

ಉದ್ಯಮಿ ಡಾ.ಜಿ.ಶಂಕರ್ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಶುಭಹಾರೈಸಿ ದರು. ಅಂಬಲಪಾಡಿ ದೇವಳದ ಧರ್ಮದರ್ಶಿ, ಸಂಸ್ಥೆಯ ಆಶ್ರಯದಾತ ಡಾ. ನಿ.ಬೀ.ವಿಜಯ ಬಲ್ಲಾ ಅಧ್ಯಕ್ಷತೆ ವಹಿಸಿದ್ದರು. ಕಟ್ಟಡದ ಇಂಜಿನಿಯರ್ ಎಂ. ಗಂಗಾಧರ ರಾವ್, ಉದ್ಯಮಿ ಯು.ವಿಶ್ವನಾಥ ಶೆಣೈ, ಮಂಡಳಿಯ ನಿಕಟ ಪೂರ್ವ ಅಧ್ಯಕ್ಷ ಎ.ರಾಘವೇಂದ್ರ ಉಪಾಧ್ಯ ಉಸ್ಥಿತರಿದ್ದರು.

ಸುಬ್ರಹ್ಮಣ್ಯ ಪದಕಣ್ಣಾಯರು ಧಾರ್ಮಿಕ ಕಾರ್ಯಕ್ರಮ ನೆರವೇರಿಸಿದರು. ಕೆ.ಜೆ ಗಣೇಶ್ ಸಹೋದರರು ಯಕ್ಷಗಾನ ಶೈಲಿಯಲ್ಲಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಅಧ್ಯಕ್ಷ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ಕೆ.ಜೆ.ಕೃಷ್ಣ ವಂದಿಸಿದರು. ಕೋಶಾಧಿಕಾರಿ ಎ.ನಟರಾಜ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News