ಸಂಸದ ಪ್ರತಾಪ್ ಸಿಂಹ ವಿರುದ್ಧ ಸಮನ್ಸ್ ಜಾರಿಗೊಳಿಸಿದ ನ್ಯಾಯಾಲಯ

Update: 2019-01-21 15:23 GMT

ಬೆಂಗಳೂರು, ಜ.21: ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿ ಆದೇಶ ಹೊರಡಿಸಿದೆ. 

ತಮ್ಮ ಕುಟುಂಬದ ಬಗ್ಗೆ ಅಶ್ಲೀಲ, ಅಸಭ್ಯ ಭಾಷೆ ಪ್ರಯೋಗಿಸಿದ ಹಿನ್ನೆಲೆಯಲ್ಲಿ ಪ್ರಕಾಶ್ ರೈ ಅವರು ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರಿದ್ದ ನ್ಯಾಯಪೀಠ, ಪ್ರತಾಪ್‌ ಸಿಂಹ ಅವರಿಗೆ ಸಮನ್ಸ್ ಜಾರಿಗೊಳಿಸಿ ಆದೇಶಿಸಿದೆ. ಪ್ರಕರಣವು ಕೆಲವು ದಿನಗಳ ಹಿಂದಷ್ಟೇ ಮೈಸೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದಿಂದ ರಾಜಕಾರಣಿಗಳ ವಿಚಾರಣೆಗೆಂದೇ ಸ್ಥಾಪಿಸಲಾದ ಸಿಟಿ ಸಿವಿಲ್ ವಿಶೇಷ ನ್ಯಾಯಾಲಯಕ್ಕೆ ವರ್ಗವಾಗಿತ್ತು.

ಪ್ರಕರಣವೇನು: ತನ್ನ ಮಗ ತೀರಿಹೋದಾಗ ನೃತ್ಯಗಾರ್ತಿಯೊಬ್ಬರ ಮಗ್ಗುಲಲ್ಲಿದ್ದ ಈ ವ್ಯಕ್ತಿಗೆ ಮೋದಿಯವರನ್ನು ಪ್ರಶ್ನಿಸುವ ನೈತಿಕತೆ ಏನಿದೆ, ರೀಲ್‌ನಲ್ಲಷ್ಟೇ ಅಲ್ಲ, ನಿಜ ಜೀವನದಲ್ಲೂ ರೈ ಖಳನಾಯಕ ಎಂದು ಪ್ರತಾಪ್ ಸಿಂಹ ಅವರು ಟ್ವಿಟರ್‌ನಲ್ಲಿ ಪ್ರಕಾಶ್ ರೈ ಅವರನ್ನು ಟೀಕಿಸಿದ್ದರು. ಇದು ಬಳಿಕ ವಿವಾದಕ್ಕೆ ಗುರಿಯಾಗಿತ್ತು. ಹೀಗಾಗಿ, ಪ್ರಕಾಶ್ ರೈ ಅವರು ಪ್ರತಾಪ್ ಸಿಂಹ ವಿರುದ್ಧ 1 ರೂ.ಗೆ ಮಾನನಷ್ಟ ಕೇಸು ದಾಖಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News