ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ: ಲಾಲಾಜಿ ಮೆಂಡನ್

Update: 2019-01-21 16:34 GMT

ಉಡುಪಿ, ಜ.21: ವಚನಕಾರರು ವಚನಗಳ ಮೂಲಕ ಸಮಾಜದ ಕೆಡುಕುಗಳನ್ನು ತಿಳಿಸಿ, ಜಾಗೃತಿ ಮೂಡಿಸಿ ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿದ್ದರು. ಕಂಡದ್ದನ್ನು ಕಂಡಂತೆ ಹೇಳಿ ಸಮಾಜದ ಸುಧಾರಣೆ ಮಾಡುತ್ತಿದ್ದರು ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಜಂಟಿ ಆಶ್ರಯದಲ್ಲಿ ವಳಕಾಡು ಸರಕಾರಿ ಸಂಯುಕ್ತ ಪ್ರೌಢ ಶಾಲೆಯ ನಳಂದಾ ಸಭಾಂಗಣದಲ್ಲಿ ಗುರುವಾರ ನಡೆದ ಶಿವಯೋಗಿ ಶ್ರೀಸಿದ್ಧರಾಮೇಶ್ವರ, ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯ ಇವರ ಜಯತಿ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡುತಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿ, ಭಾಷೆ, ಸಂಸ್ಕೃತಿ, ಸಂಪ್ರದಾಯದ ಸೊಗಡನ್ನು ವಚನಕಾರರು ತಮ್ಮ ವಚನಗಳಲ್ಲಿ ಅದ್ಭುತವಾಗಿ ವಿವರಿಸಿದ್ದಾರೆ. ನಶಿಸುತ್ತಿರುವ ಸಂಪ್ರದಾಯಗಳನ್ನು ತಮ್ಮ ವಚನಗಳ ಮೂಲಕಎತ್ತಿ ಹಿಡಿದಿದ್ದು, ಸಂಪ್ರದಾಯಗಳು ಅಧಃಪತನದತ್ತ ಸಾಗಬಾರದೆಂದು ಶ್ರಮಿಸಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ಸಾಹಿತಿ ಮೇಟಿ ಮುದಿಯಪ್ಪ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ, ಅಂಬಿಗರ ಚೌಡಯ್ಯರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಗಾಯಕಿ ಮೀನಾಕ್ಷಿ ಹಾಗೂ ಬಳಗದಿಂದ ಗೀ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ನಗರಸಭಾ ಸದಸ್ಯೆ ರಜನಿ ಹೆಬ್ಬಾರ್, ಸರ್ಕಲ್ ಇನ್ಸ್‌ಪೆ್ಟರ್ ಮಂಜುನಾಥ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸ್ವಾಗತಿಸಿದರು. ವಳಕಾಡು ಸರಕಾರಿ ಸಂಯುಕ್ತ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯಿನಿ ನಿರ್ಮಲಾ ರಾವ್ ವಂದಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News