ಅಂಗಡಿಗಳ ಮೇಲೆ ದಾಳಿ ನಡೆಸಿ 300ಕ್ಕೂ ಹೆಚ್ಚು ಮಾರಕಾಸ್ತ್ರಗಳು ಜಪ್ತಿ

Update: 2019-01-21 17:02 GMT

ಬೆಂಗಳೂರು, ಜ.21: ಚಾಕು, ಮಚ್ಚು ಸೇರಿದಂತೆ ಇನ್ನಿತರ ಮಾರಕಾಸ್ತ್ರಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿರುವ ಪಶ್ಚಿಮ ವಿಭಾಗದ ಪೊಲೀಸರು, 300ಕ್ಕೂ ಹೆಚ್ಚು ಮಾರಕಾಸ್ತ್ರಗಳನ್ನು ಜಪ್ತಿ ಮಾಡಿದ್ದಾರೆ.

ನಗರದ ಕಾಟನ್‌ಪೇಟೆಯ ಸುಮಾರು 15 ಅಂಗಡಿಗಳ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಚಾಕು, ಡ್ರಾಗರ್ ಇನ್ನಿತರ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News