ಉದ್ಯಾವರ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಬಲಿ

Update: 2019-01-21 17:11 GMT

ಕಾಪು, ಜ.21: ಉದ್ಯಾವರ ಹಾಲಿಮಾ ಸಾಬ್ಜು  ಹಾಲ್ ಎದುರು ಸೋಮವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಗಂಗೊಳ್ಳಿ ಮೊವಾಡಿ ನಿವಾಸಿ ಶಿವರಾಜ್(39) ಎಂದು ಗುರುತಿಸಲಾಗಿದೆ.

ಬೈಕ್ ಮಂಗಳೂರಿನಿಂದ ಉಡುಪಿ ಕಡೆ ಬರುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News