ಶಿವಕುಮಾರ ಸ್ವಾಮೀಜಿ ನಿಧನ ಹಿನ್ನೆಲೆ: ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ

Update: 2019-01-21 17:13 GMT

ಬೆಂಗಳೂರು, ಜ.21: ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿರುವ ಹಿನ್ನೆಲೆ ಜ.23ರಂದು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ, 2018ನೆ ಸಾಲಿನ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಲಾಗಿದೆ. 

ಶರಣ ಸಂಸ್ಕೃತಿಯ ಬ್ರಹ್ಮ ಕಮಲ, ಕಾಯಕಯೋಗಿ, ಶಿಕ್ಷಣ ದಾಸೋಹ, ಪದ್ಮಭೂಷಣ, ಕರ್ನಾಟಕ ರತ್ನ ಸಿದ್ದಗಂಗಾ ಮಠದ ಮಠಾಧೀಶ ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿರುವುದು ಈ ನಾಡಿಗೆ ತುಂಬಲಾರದ ನಷ್ಟವಾಗಿದೆ. ಮಠದ ಭಕ್ತರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅಕಾಡೆಮಿ ಅಧ್ಯಕ್ಷ ಎಂ.ಸಿದ್ಧರಾಜು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News