ಮೈಸೂರು: ಮನೆ, ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯಿಸಿ ದಸಂಸ ಧರಣಿ

Update: 2019-01-21 17:24 GMT

ಮೈಸೂರು,ಜ.21: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮನೆ ಹಂಚಿಕೆ, ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಧರಣಿ ನಡೆಯಿತು.

ನಗರದ ಮೈಸೂರಿನ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಎದುರು ಸೋಮವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಏಕಲವ್ಯ ನಗರದಲ್ಲಿ ಅಲೆಮಾರಿಗಳಿಗೆ ವಸತಿ ಕಲ್ಪಿಸಿರುವ ಮನೆಗಳನ್ನು ಹಂಚಿಕೆ ಮಾಡಿ ಮೂಲಭೂತ ಸೌಕರ್ಯ ಒದಗಿಸ ಬೇಕು, ಮನೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ, ಕಳಪೆ ಕಾಮಗಾರಿಯನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕು, ಕೊಳಗೇರಿ ಅಭಿವೃದ್ಧಿ ಮಂಡಳಿಯ ಇಂಜಿನಿಯರ್ ಭ್ರಷ್ಟಾಚಾರವೆಸಗಿದ್ದಾರೆ. ಕೂಡಲೇ ಭ್ರಷ್ಟ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನಿಂಗರಾಜ್ ಮಲ್ಲಾಡಿ, ಹೆಚ್.ಬಿ ದಿವಾಕರ್, ಪುಟ್ಟ ಲಕ್ಷ್ಮಮ್ಮ, ವೆಂಕಟೇಶ್, ರಮಾದೇವಿ, ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News