ಒಲಿಂಪಿಕ್ಸ್ ಬ್ಯಾಡ್ಮಿಂಟನ್ ನಲ್ಲಿ ಭಾರತಕ್ಕೆ ಚಿನ್ನ: ಗೋಪಿ ಚಂದ್

Update: 2019-01-21 18:54 GMT

ಮುಂಬೈ, ಜ.21: ವರ್ಷದಿಂದ ವರ್ಷಕ್ಕೆ ತನ್ನ ಪ್ರದರ್ಶನದಲ್ಲಿ ಸುಧಾರಿಸುತ್ತಿರುವ ಭಾರತ, 2020ರ ಟೋಕಿಯೊ ಒಲಿಂಪಿಕ್ಸ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಚಿನ್ನ ಗೆಲ್ಲಲಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಐಡಿಬಿಐ ಫೆಡರಲ್ ಕ್ವೆಸ್ಟ್ ಕಾರ್ಯಕ್ರಮದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘‘ಪ್ರತೀವರ್ಷ ನಾವು ಪ್ರದರ್ಶನದಲ್ಲಿ ಸುಧಾರಣೆ ಕಾಣುತ್ತಿದ್ದೇವೆ. 2008ರ ಬೀಜಿಂಗ್ ಒಲಿಂಪಿಕ್ಸ್‌ನ ಕ್ವಾರ್ಟರ್‌ಫೈನಲ್ ಫಲಿತಾಂಶಗಳು, 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಮೊದಲ ಕಂಚಿನ ಪದಕ(ಸೈನಾ ನೆಹ್ವಾಲ್), 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಬೆಳ್ಳಿ ಪದಕ(ಪಿ.ವಿ. ಸಿಂಧು)ಗೆದ್ದಿದ್ದು, ಹಾಗೆಯೇ ಈ ಬಾರಿ ಚಿನ್ನ ಗೆಲ್ಲುವ ವಿಶ್ವಾಸವಿದೆ’’ ಎಂದು ಗೋಪಿಚಂದ್ ಹೇಳಿದ್ದಾರೆ.

‘‘ಮೊದಲು ಭಾರತದಲ್ಲಿ ಬ್ಯಾಡ್ಮಿಂಟನ್ ಎಂದರೆ ಕೇವಲ ಪುರುಷರ ಆಟವಾದಂತಿತ್ತು. ನಂದು ನಾಟೇಕರ್, ಸುರೇಶ್ ಗೋಯಲ್ ಹಾಗೂ ಪ್ರಕಾಶ್ ಪಡುಕೋಣೆ ಪ್ರಮುಖ ಆಟಗಾರರಾಗಿದ್ದರು. ಆದರೆ ಸೈನಾ ಆ ಮನಸ್ಥಿತಿಯನ್ನು ಬದಲಾಯಿಸಿ, ಮಹಿಳೆಯರೂ ಬ್ಯಾಡ್ಮಿಂಟನ್‌ನಲ್ಲಿ ಮಿಂಚಬಲ್ಲರು’’ ಎಂದು ತೋರಿಸಿಕೊಟ್ಟರು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News