ಹೊಲಿಗೆ ಕೌಶಲ್ಯದ ಜೊತೆ ವೃತ್ತಿಪರತೆ ಬೆಳೆಸಿಕೊಳ್ಳಲು ಕರೆ

Update: 2019-01-22 12:53 GMT

ಮಣಿಪಾಲ, ಜ.22: ಭಾರತೀಯ ವಿಕಾಸ ಟ್ರಸ್ಟ್‌ನ ಮೂಲಕ ಸಿಂಡಿಕೇಟ್ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಆಯೋಜಿಸಿದ ಒಂದು ತಿಂಗಳ ಹೊಲಿಗೆ ತರಬೇತಿಯ ಸಮಾರೋಪ ಬಾರತೀಯ ವಿಕಾಸ ಟ್ರಸ್ಟಿನಲ್ಲಿ ಇತ್ತೀಚೆಗೆ ನಡೆಯಿತು.

ಸಿಂಡಿಕೇಟ್ ಬ್ಯಾಂಕಿನ ಮಣಿಪಾಲ ವಲಯ ಕಛೇರಿಯ ಮಹಾಪ್ರಬಂಧಕ ಭಾಸ್ಕರ ಹಂದೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಾ ಹೊಲಿಗೆ ತರಬೇತಿಯಲ್ಲಿ ಶಿಬಿರಾರ್ಥಿಗಳು ಹೊಲಿಗೆ ಕೌಶಲ್ಯವನ್ನು ಕಲಿಯುದರ ಜೊತೆಗೆ ವೃತ್ತಿಪರ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ತಿಳಿಸಿದರು. ಇಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಹೊಲಿಗೆ ಕ್ಷೇತ್ರದಲ್ಲಿ ಸ್ವ ಉದ್ಯೋಗ ಪ್ರಾರಂಭಿಸಲು ಆರ್ಥಿಕ ಸಹಾಯವನ್ನು ಸಿಂಡಿಕೇಟ್ ಬ್ಯಾಂಕ್ ನೀಡಲು ಸಿದ್ಧವಿದೆ ಎಂದರು.

ಇದೇ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ತಮ್ಮ ಅನುಭವವನ್ನು ವಿವರಿಸಿದರಲ್ಲದೇ ತಾವೇ ಹೊಲಿದು ಸಿದ್ದ ಪಡಿಸಿದ ವಿವಿಧ ವಿನ್ಯಾಸದ ಉಡುಪುಗಳನ್ನು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ವಿಕಾಸ ಟ್ರಸ್ಟಿನ ಹಿರಿಯ ಸಲಹೆಗಾರ ಪ್ರಭಾಕರ ಶೆಣೈ, ಸಿಂಡಿಕೇಟ್ ಬ್ಯಾಂಕಿನ ಉಡುಪಿ ವಲಯ ಕಛೇರಿಯ ಲೀಡ್ ಡಿಸ್ಟ್ರಿಕ್ಟ್ ಮೆನೇಜರ್ ರುದ್ರೇಶ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ಮುಕ್ತಾ ಶ್ರೀನಿವಾಸ್ ಭಟ್ ಮಾತನಾಡಿ ಹೊಲಿಗೆ ಕಲಿಯಲು ತಾಳ್ಮೆ ಬಹಳ ಮುಖ್ಯ. ದಿನವೂ ಕನಿಷ್ಠ ಒಂದು ಗಂಟೆ ಅವಧಿ ಇದಕ್ಕಾಗಿ ಮೀಸಲಿಡಬೇಕು. ಆಗ ಮಾತ್ರ ವೃತಿ್ತ ಪರತೆ ಗಳಿಸಲು ಸಾಧ್ಯ ಎಂದರು.

ಭಾರತೀಯ ವಿಕಾಸ ಟ್ರಸ್ಟಿನ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಸ್ವಾಗತಿಸಿ, ಆಡಳಿತಾಧಿಕಾರಿ ಐ ಜಿ ಕಿಣಿ ವಂದಿಸಿದರು. ಉಡುಪಿ ಜಿಲ್ಲೆಯ 35ಕ್ಕೂ ಅಧಿಕ ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News