ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ: 10 ಕೆಜಿ ಗಾಂಜಾ ಜಪ್ತಿ

Update: 2019-01-22 13:03 GMT

ಬೆಂಗಳೂರು, ಜ.22: ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸಿರುವ ಇಲ್ಲಿನ ನಂದಿನಿಲೇಔಟ್ ಠಾಣಾ ಪೊಲೀಸರು 10 ಗಾಂಜಾ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡು ಮೂಲದ ದಿವಾಕರ್(21) ಹಾಗೂ ಶ್ರೀರಾಂ(19) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಎಫ್‌ಟಿಐ ಸರ್ಕಲ್‌ನಲ್ಲಿ ಇಬ್ಬರು ಅಪರಿಚಿತರು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಬಂದ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ, ಅಜಿತ್ ಎಂಬುವವನು ಮಾದಕ ವಸ್ತು ಗಾಂಜಾವನ್ನು ತಮಿಳುನಾಡಿನ ಥೇಣಿ ಜಿಲ್ಲೆ, ಕಂಬಮ್ ಎಂಬ ಸ್ಥಳದಿಂದ ತೆಗೆದುಕೊಂಡು ಬಂದು ಬೆಂಗಳೂರಿನಲ್ಲಿ ಮಾರಾಟ ಮಾಡಲು ತಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಬಂದಿರುವುದಾಗಿ ತಿಳಿಸಿರುತ್ತಾರೆ. ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಧನಂಜಯ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News