ಶೋಕಾಚರಣೆ ಆದೇಶ ಉಲ್ಲಂಘನೆ ಆರೋಪ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ದೂರು

Update: 2019-01-22 14:39 GMT

ಬೆಂಗಳೂರು, ಜ.22: ಡಾ.ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿರುವ ಹಿನ್ನೆಲೆ ರಾಜ್ಯ ಸರಕಾರ ಮೂರು ದಿನ ಶೋಕಾಚರಣೆ ಘೋಷಿಸಿದ ಆದೇಶ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮಂಗಳವಾರ ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷ ಬಿ.ಹರೀಶ್‌ಕುಮಾರ್ ಎಂಬುವರು ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ವಿರುದ್ಧ ದೂರು ಸಲ್ಲಿಸಿದ್ದಾರೆ.

ಶೋಕಾಚರಣೆ ವೇಳೆ ಯಾವುದೇ ಸರಕಾರಿ ಕಾರ್ಯಕ್ರಮ ನಡೆಸುವಂತಿಲ್ಲ. ಆದರೆ, ಸಮಾಜ ಕಲ್ಯಾಣ ಇಲಾಖೆ ನಗರದ ಖಾಸಗಿ ಹೊಟೇಲ್‌ನಲ್ಲಿ ಸಂವಿಧಾನ ಸಂವಾದ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದರಿಂದ ಸರಕಾರಿ ಆದೇಶ ಉಲ್ಲಂಘನೆ ಆಗಿದ್ದು, ಈ ಸಂಬಂಧ ದೂರು ದಾಖಲಿಸಲಾಗಿದೆ ಎಂದು ಹರೀಶ್ ಸುದ್ದಿಗಾರರಿಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News