ಕೇಜ್ರಿವಾಲ್, ಆಪ್‌ನ ಇತರ ಸದಸ್ಯರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

Update: 2019-01-22 16:29 GMT

ಹೊಸದಿಲ್ಲಿ, ಜ. 22: ದಿಲ್ಲಿಯ ಮತದಾರರ ಪಟ್ಟಿಯಿಂದ ಲಕ್ಷಾಂತರ ಮತದಾರರ ಹೆಸರನ್ನು ಅಳಿಸಲಾಗಿದೆ ಎಂದು ತಮ್ಮ ಮೇಲೆ ಆರೋಪ ಮಾಡಿದ್ದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಆಪ್‌ನ ಇತರ ಸದಸ್ಯರ ವಿರುದ್ಧ ಬಿಜೆಪಿಯ ದಿಲ್ಲಿ ಘಟಕ ಸೋಮವಾರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದೆ.

ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅಲ್ಲದೆ ರಾಜ್ಯ ಸಭೆಯ ಆಪ್ ಸದಸ್ಯ ಸುಶೀಲ್ ಕುಮಾರ್ ಗುಪ್ತಾ, ಶಾಸಕ ಮನೋಜ್ ಕುಮಾರ್ ಹಾಗೂ ಆಪ್‌ ವಕ್ತಾರ ಅಟಿಶಿ ಮಲೇನಾ ಅವರ ಹೆಸರು ಉಲ್ಲೇಖಿಸಲಾಗಿದೆ. ಬಿಜೆಪಿ ನಾಯಕ ರಾಜೀವ್ ಬಬ್ಬರ್ ದಿಲ್ಲಿ ನ್ಯಾಯಾಲಯದಲ್ಲಿ ಈ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ದಿಲ್ಲಿಯ ಮತದಾರರ ಪಟ್ಟಿಯಿಂದ 30 ಲಕ್ಷ ಮತದಾರರ ಹೆಸರನ್ನು ಅಳಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದರು. ಬಿಜೆಪಿ ಈ ಆರೋಪವನ್ನು ತಿರಸ್ಕರಿಸಿತ್ತು. ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನು ಅಳಿಸುವುದು ಚುನಾವಣಾ ಆಯೋಗದ ಜವಾಬ್ದಾರಿ. ಇದು ಯಾವುದೇ ರಾಜಕೀಯ ಪಕ್ಷದ ಜವಾಬ್ದಾರಿ ಅಲ್ಲ. ಆಪ್‌ನ ಆರೋಪ ದುರಾದೃಷ್ಟಕರ ಎಂದು ಬಿಜೆಪಿ ಹೇಳಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News