ಜ.27ಕ್ಕೆ ಸಿವಿಲ್ ಪೊಲೀಸ್ ಪೇದೆ ಪರೀಕ್ಷೆ

Update: 2019-01-22 16:39 GMT

ಬೆಂಗಳೂರು, ಜ.22: ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಪೇದೆ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.27ರಂದು ಬೆಳಗ್ಗೆ 10:30ರಿಂದ 12 ಗಂಟೆಯವರೆಗೆ ನಗರದ 64 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 41,220 ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ.

ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕರೆ ಪತ್ರವನ್ನು ಪಡೆದು, ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News