ಶೋಕಾಚರಣೆ ನಡುವೆ ಕಾರ್ಯಕ್ರಮ ಆಯೋಜನೆ ಆರೋಪ: ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಬಿಜೆಪಿ ಆಕ್ರೋಶ

Update: 2019-01-22 16:51 GMT

ಬೆಂಗಳೂರು, ಜ.22: ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಅಗಲಿಕೆಯ ನೋವಿನಲ್ಲಿ ಇಡೀ ದೇಶ ಶೋಕಾಚರಣೆ ನಡೆಸುತ್ತಿದೆ. ಆದರೆ, ರಾಜ್ಯ ಸರಕಾರದ ಸಮಾಜ ಕಲ್ಯಾಣ ಇಲಾಖೆ ‘ಸಂವಿಧಾನ ಸಂಭಾಷಣೆ’ ಕಾರ್ಯಕ್ರಮ ಆಯೋಜಿಸಿರುವುದು ಖಂಡನಾರ್ಹ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರಕಾರ ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದರೂ, ಸಮಾಜ ಕಲ್ಯಾಣ ಇಲಾಖೆ ಮಾತ್ರ ತನಗೇನೂ ಸಿದ್ಧಗಂಗಾ ಶ್ರೀಗಳ ಅಗಲಿಕೆ ಸಂಬಂಧವಿಲ್ಲದ ವಿಷಯ ಎನ್ನುವಂತೆ ವರ್ತಿಸಿರುವುದನ್ನು ಯಾರೂ ಒಪ್ಪಲಾಗದು ಎಂದು ಅವರು ತಿಳಿಸಿದ್ದಾರೆ.

ಶೋಕಾಚರಣೆ ನಡೆಯುತ್ತಿರುವಾಗಲೇ ಮಾಜಿ ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿ, ಸಿಪಿಎಂ ನಾಯಕಿ ಬೃಂದಾ ಕಾರಟ್, ಕನ್ಹಯ್ಯಾ ಕುಮಾರ್, ಎಂಐಎಂ ನಾಯಕ ಅಸಾದುದ್ದೀನ್ ಉವೈಸಿಯನ್ನು ಆಹ್ವಾನಿಸಿರುವ ಈ ಕಾರ್ಯಕ್ರಮದ ರಹಸ್ಯ ಕಾರ್ಯಸೂಚಿಯೇ ಬೇರೆ ಎನ್ನುವುದನ್ನು ಸಾಬೀತು ಮಾಡಿದೆ ಎಂದು ಅವರು ಪ್ರಕಟನೆಯಲ್ಲಿ ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News