ನರೋಡಾ ಪಾಟಿಯಾ ಪ್ರಕರಣ: ನಾಲ್ವರು ಆರೋಪಿಗಳಿಗೆ ಜಾಮೀನು

Update: 2019-01-23 06:10 GMT

ಹೊಸದಿಲ್ಲಿ, ಜ.23: ಗುಜರಾತ್ ಗಲಭೆ ವೇಳೆ ನಡೆದ ನರೋಡಾ ಪಾಟಿಯಾ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಮಂಗಳವಾರ ನಾಲ್ವರು ಆರೋಪಿಗಳಿಗೆ ಜಾಮೀನು ನೀಡಿದೆ. 2002ರಲ್ಲಿ ನಡೆದಿದ್ದ ಈ ಘಟನೆಯಲ್ಲಿ 97 ಮಂದಿ ಸಾವನ್ನಪ್ಪಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ತೀರ್ಪನ್ನು ಆಧರಿಸಿ ಜಸ್ಟಿಸ್ ಎಎಂ ಖಾನ್ವಿಲ್ಕರ್ ನೇತೃತ್ವದ ಸುಪ್ರೀಂಕೋರ್ಟ್ ನ್ಯಾಯಪೀಠ ನಾಲ್ವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಓರ್ವ ಆರೋಪಿಗೆ ಮಗಳ ಮದುವೆಯಲ್ಲಿ ಪಾಲ್ಗೊಳ್ಳಲು ತಾತ್ಕಾಲಿಕ ಜಾಮೀನು ನೀಡಲಾಗಿದೆ.

ಗುಜರಾತ್ ಹೈಕೋರ್ಟ್ ಕಳೆದ ವರ್ಷ ಬಜರಂಗ ದಳದ ಮುಖಂಡ ಬಾಬು ಬಜರಂಗಿ ಹಾಗೂ ಇತರರು ದೋಷಿಗಳೆಂದು ತೀರ್ಪು ನೀಡಿತ್ತು. ಆದರೆ, ಬಿಜೆಪಿಯ ಮಾಜಿ ಸಚಿವೆ ಮಾಯಾ ಕೊಡ್ನಾನಿಯವರನ್ನು ಪ್ರಕರಣದಲ್ಲಿ ಸಾಕ್ಷಿಗಳ ಕೊರತೆ ಹಿನ್ನೆಲೆಯಲ್ಲಿ ದೋಷ ಮುಕ್ತಗೊಳಿಸಿತ್ತು.

ಉಮೇಶ್ ಭಾಯ್ ಭಾರ್ವಾಡ್, ರಾಜ್‌ಕುಮಾರ್, ಹರ್ಷದ್ ಹಾಗೂ ಪ್ರಕಾಶ್‌ಭಾಯ್ ರಾಥೋಡ್ ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದ ಆರೋಪಿಗಳಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News