ಜೆಎನ್‌ಯು ದೇಶದ್ರೋಹ ಪ್ರಕರಣ: ಕಾನೂನು ಕ್ರಮ ಜರಗಿಸಲು ದಿಲ್ಲಿ ಸರಕಾರದಿಂದ ಕಾನೂನು ಸಲಹೆ

Update: 2019-01-23 13:41 GMT

ಹೊಸದಿಲ್ಲಿ,ಜ.23: ಇಲ್ಲಿನ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ ಎನ್ನಲಾದ ದೇಶದ್ರೋಹ ಪ್ರಕರಣದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ದಿಲ್ಲಿ ಸರಕಾರ ಕಾನೂನು ಸಲಹೆ ಪಡೆಯುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸರಕಾರದಿಂದ ಅನುಮತಿ ಪಡೆಯದೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಮತ್ತು ಇತರ ಒಂಬತ್ತು ಮಂದಿಯ ವಿರುದ್ಧ ದೇಶದ್ರೋಹದಡಿ ದೋಷಾರೋಪ ಸಲ್ಲಿಸಿದ್ದ ದಿಲ್ಲಿ ಪೊಲೀಸರ ಕ್ರಮವನ್ನು ನ್ಯಾಯಾಲಯ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಆಪ್ ಸರಕಾರ ಮತ್ತು ದಿಲ್ಲಿ ಪೊಲೀಸರು ಪರಸ್ಪರ ಆರೋಪ ಪ್ರತ್ಯಾರೋಪಗಳನ್ನು ಮಾಡಿದ್ದರು. ನಿಯಮದ ಪ್ರಕಾರ, ಕಾನೂನು ಕ್ರಮಕ್ಕೆ ಅನುಮತಿ ನೀಡಲು ಸರಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಲಾಗಿದೆ. ದಿಲ್ಲಿ ಪೊಲೀಸರು ದೋಷಾರೋಪ ಸಲ್ಲಿಸಲು ಮೂರು ವರ್ಷ ತೆಗೆದುಕೊಂಡಿದ್ದಾರೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕೂ ಮೊದಲು ಸರಕಾರಕ್ಕೆ ತನ್ನ ಪ್ರಯತ್ನವನ್ನು ಮಾಡುವ ಕಾನೂನು ಸಲಹೆ ಪಡೆಯುವ ಅವಕಾಶ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದರೆ ಮೂರು ತಿಂಗಳ ನಂತರವೂ ಸರಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ಕಾನೂನು ಕ್ರಮಕ್ಕೆ ಅನುಮತಿ ನೀಡಲಾಗಿದೆ ಎಂದು ಭಾವಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಸರಕಾರದ ಅನುಮತಿ ಪಡೆಯಲು ಬಾಕಿಯಿದೆ ಎಂದು ತಿಳಿಸಿದ್ದ ದಿಲ್ಲಿ ಪೊಲೀಸರು ಜನವರಿ 14ರಂದು ನ್ಯಾಯಾಲಯದಲ್ಲಿ ದೋಷಾರೋಪ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News