ಜ. 24: ಮಕ್ಕಳ ಕಾನೂನುಗಳ ಅರಿವು ಕಾರ್ಯಕ್ರಮ

Update: 2019-01-23 16:49 GMT

ಉಡುಪಿ, ಜ. 23: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಮಾದ್ಯಮ ಪ್ರತಿನಿಧಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ಹಾಗೂ ಮಕ್ಕಳ ಕಾನೂನುಗಳ ಕುರಿತು ಅರಿವು ಕಾರ್ಯಕ್ರಮವನ್ನು ಗುರುವಾರ ಅಪರಾಹ್ನ 2:30ಕ್ಕೆ ಮಣಿಪಾಲದ ಜಿಪಂ ಸಭಾಂಗಣದಲ್ಲಿ ಆಯೋಜಿಸಿದೆ.

ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬ. ನಿಂಬರಗಿ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News