ಮಂಗಳೂರು: ಬಾಲನ್ಯಾಯ ಮಂಡಳಿಗೆ ಸಮಾಜ ಕಾರ್ಯಕರ್ತರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನ

Update: 2019-01-23 17:29 GMT

ಮಂಗಳೂರು, ಜ.23: ಬಾಲನ್ಯಾಯ ಮಂಡಳಿಗಳಿಗೆ ಮೂರು ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾಸಿಸಲಾಗಿದೆ.

ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015 ಸೆಕ್ಷನ್ (4)ರನ್ವಯ ಒಂದು ಜಿಲ್ಲೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಲನ್ಯಾಯ ಮಂಡಳಿಗಳನ್ನು ಸ್ಥಾಪಿಸಲು ಅವಕಾಶವಿದೆ. ಅದರಂತೆ ಕಾನೂನಿನನೊಡನೆ ಸಂಘರ್ಷ(ಅಪ್ರಾಪ್ತರು)ದಲ್ಲಿರುವ ಮಕ್ಕಳ ಹೆಚ್ಚು ಪ್ರಕರಣಗಳು ಬಾಕಿ ಇರುವ ಬೆಂಗಳೂರು ನಗರ, ವಿಜಯಪುರ, ಕಲ್ಬುರ್ಗಿ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಈ 5 ಜಿಲ್ಲೆಗಳನ್ನು ಒಳಗೊಂಡಂತೆ 5 ಹೆಚ್ಚುವರಿ ಬಾಲನ್ಯಾಯ ಮಂಡಳಿ ಸ್ಥಾಪಿಸಲಾಗಿದೆ. ಬಾಲನ್ಯಾಯ ಮಂಡಳಿಗಳಿಗೆ 2019ರಿಂದ 2022ರವರೆಗೆ ಮೂರು ವರ್ಷಗಳ ಕಾಲಾವಧಿಗಾಗಿ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ನಮೂನೆ, ಸೂಚನೆಗಳು, ವಿಶೇಷ ಸೂಚನೆಗಳು, ದೃಢೀಕರಣಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ ಸೈಟ್ dwcdkar.gov.in ನಲ್ಲಿ ಲಭ್ಯವಿದೆ. ಭರ್ತಿ ಮಾಡಿದ ಅರ್ಜಿಗಳನ್ನು ನೋಂದಾಯಿತ ಅಂಚೆ ಮೂಲಕ ಅಥವಾ ಮುದ್ದಾಂನಲ್ಲಿ ಜ.29ರಂದು ಸಂಜೆ 5:30ರ ಒಳಗೆ ನಿರ್ದೇಶಕರು, ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಕೇರಾಫ್, ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಸೊಸೈಟಿ ಬೆಂಗಳೂರು ದೂ.ಸಂ.: 080- 22879381/ 82/ 83 ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾಧಿಕಾರಿ ಕಚೇರಿ ಮೊದಲನೇ ಮಹಡಿ ದ.ಕ. ಜಿಲ್ಲೆ, ಮಂಗಳೂರು-575001. ದೂ.ಸಂ.: 0824- 2440004/ 9482756407 ಅವರನ್ನು ಸಂಪರ್ಕಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News