ಅಪ್ರಾಪ್ತ ಬಾಲಕನನ್ನು ಜೀತಕ್ಕೆ ಇರಿಸಿಕೊಂಡಿದ್ದ ವ್ಯಕ್ತಿಗೆ 10 ಸಾವಿರ ದಂಡ

Update: 2019-01-23 18:01 GMT

ಪಾಂಡವಪುರ,ಜ.23: ಅಪ್ರಾಪ್ತ ಬಾಲಕನನ್ನು ಜೀತಕ್ಕೆ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನರಲ್ ಸ್ಟೋರ್ ಮಾಲಕನಿಗೆ ಪಟ್ಟಣದ ಜೆಎಂಎಫ್‍ಸಿ ಸಿವಿಲ್ ನ್ಯಾಯಾಲಯ 10 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.

ಪಟ್ಟಣದ ಅರವಿಂದ್ ಭಂಡಾರ್ ಜನರಲ್ ಸ್ಟೋರ್ ಮಾಲಕ ಎನ್.ಮೂರ್ತಿ ಎಂಬವರಿಗೆ ನ್ಯಾಯಾಲಯ 10 ಸಾವಿರ ದಂಡ ವಿಧಿಸಿದೆ. ಕಳೆದ 2005 ಆಗಸ್ಟ್ 25ರಂದು ಪಟ್ಟಣದ ಬಾಲಕಾರ್ಮಿಕ ವಿಶೇಷ ತನಿಖಾ ತಂಡದ ಸದಸ್ಯರು ಪಟ್ಟಣದ ಅರವಿಂದ್ ಭಂಡಾರ ಜನರಲ್ ಸ್ಟೋರ್ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಅಂಗಡಿ ಮಾಲಕ ಎನ್.ಮೂರ್ತಿ 13 ವರ್ಷದ ಅಪ್ರಾಪ್ತ ಬಾಲಕನ್ನು ಜೀತಕ್ಕೆ ಇರಿಸಿಕೊಂಡು ಕೆಲಸ ಮಾಡಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ತಕ್ಷಣ ಬಾಲ ಕಾರ್ಮಿಕ ವಿಶೇಷ ತನಿಖಾ ತಂಡದ ಸದಸ್ಯರು ಬಾಲಕನ್ನು ವಶಕ್ಕೆ ಪಡೆದು ಅಂಗಡಿ ಮಾಲಕನ ವಿರುದ್ಧ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಕಾಯ್ದೆ-1961ರ ಕಲಂ 24 ಮತ್ತು 30(3)ರಡಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ.ರವಿಕಾಂತ್ ಅವರು ಅಂಗಡಿ ಮಾಲಕ ಅಪ್ರಾಪ್ತ ಬಾಲಕನನ್ನು ಕೆಲಸಕ್ಕೆ ನೇಮಿಸಿಕೊಂಡು ಕೆಲಸ ಮಾಡಿಸಿಕೊಳ್ಳುತ್ತಿರುವುದು ಸಾಕ್ಷಾಧಾರಗಳಿಂದ ಸಾಬೀತಾದ ಹಿನ್ನೆಯಲ್ಲಿ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಕಾಯ್ದೆ-1961ರ ಕಲಂ 24 ಮತ್ತು 30(3)ರಡಿ ಅಂಗಡಿ ಮಾಲಕ ಎನ್.ಮೂರ್ತಿಗೆ 10 ಸಾವಿರ ದಂಡ ವಿಧಿಸಿದೆ. ಒಂದು ವೇಳೆ ದಂಡ ಪಾವತಿಸಲು ತಪ್ಪಿದ್ದಲ್ಲಿ 6 ತಿಂಗಳ ಜೈಲು ಶಿಕ್ಷೆ ಅನುಭವಿಸುವಂತೆ ಆದೇಶ ಪ್ರಕಟಿಸಿದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಎಸ್.ಶಿವಕುಮಾರ್ ವಾದ ಮಂಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News