×
Ad

ಲೋಕಸಭಾ ಚುನಾವಣೆ: ಉ.ಪ್ರದೇಶದಲ್ಲಿ ಬಿಜೆಪಿಗೆ ‘ಮಹಾಘಟಬಂಧನ’ ಶಾಕ್

Update: 2019-01-24 19:32 IST

ಹೊಸದಿಲ್ಲಿ, ಜ.24: ಎಬಿಪಿ ನ್ಯೂಸ್ ಮತ್ತು ಸಿ-ವೋಟರ್ ನಡೆಸಿದ ಲೋಕಸಭಾ ಚುನಾವಣಾ ಪೂರ್ವ ಸಮೀಕ್ಷೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಭಾರೀ ಹಿನ್ನಡೆ ಅನುಭವಿಸಲಿದೆ ಎನ್ನುವುದನ್ನು ಕಂಡುಕೊಂಡಿದೆ. ಡಿಸೆಂಬರ್ ವೇಳೆ 36ರಷ್ಟಿದ್ದ ಗೆಲುವಿನ ಸ್ಥಾನಗಳು ಈ ಬಾರಿ 25ಕ್ಕೆ ಕುಸಿದಿದೆ.

ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ರಾಷ್ಟ್ರೀಯ ಲೋಕದಳದ ಮಹಾಘಟಬಂಧನವು ಈ ಬಾರಿಯ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ. ಮಹಾಘಟಬಂಧನವು ರಾಜ್ಯದಲ್ಲಿ 51 ಸ್ಥಾನಗಳನ್ನು ಗೆಲ್ಲಲಿದ್ದು, ಈ ಮೂಲಕ ಎನ್ ಡಿಎ ಮೈತ್ರಿಕೂಟಕ್ಕೆ 48 ಸ್ಥಾನಗಳು ನಷ್ಟವಾಗಲಿದೆ. 2014ರಲ್ಲಿ ಬಿಜೆಪಿ ಉತ್ತರ ಪ್ರದೇಶದಲ್ಲಿ 73 ಸ್ಥಾನಗಳನ್ನು ಗೆದ್ದಿತ್ತು.

ಉತ್ತರ ಪ್ರದೇಶದ ಉಸ್ತುವಾರಿಯಾಗಿ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿಯವರನ್ನು ನೇಮಿಸುವ ಮುನ್ನ ಈ ಸಮೀಕ್ಷೆ ನಡೆಸಲಾಗಿತ್ತು ಎನ್ನುವುದನ್ನು ಸಿ-ವೋಟರ್ ಸ್ಪಷ್ಟಪಡಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News