ಕಾಲು ಬಾಯಿ ರೋಗ: ಲಸಿಕಾ ಕಾರ್ಯಕ್ರಮ
ಉಡುಪಿ, ಜ.24: ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕಾಲು ಬಾಯಿ ರೋಗ ನಿಯಂತ್ರಣ ಯೋಜನೆಯಡಿ 15ನೇ ಸುತ್ತಿನ ಲಸಿಕಾ ಕಾರ್ಯಕ್ರಮವನ್ನು ಜ.28ರಿಂದ ಫೆ. 16ರ ಅವಧಿಯಲ್ಲಿ ಇಲಾಖೆ ಮತ್ತು ದ.ಕ.ಹಾಲು ಒಕ್ಕೂಟ ಮಂಗಳೂರು ಇವರ ಸಹಯೋಗ ದಲ್ಲಿ ಕೈಗೊಳ್ಳಲಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಲಸಿಕೆಗೆ ಅರ್ಹವಿರುವ 2,32,484 ಜಾನುವಾರು ಗಳಿಗೆ (ದನ, ಕರು, ಎಮ್ಮೆ, ಹಂದಿ) ಉಚಿತವಾಗಿ ಲಸಿಕೆ ಹಾಕಲಾಗುವುದು. ಹೈನುಗಾರರು ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಲಸಿಕೆ ಹಾಕುವ ದಿನಾಂಕಗಳ ಬಗ್ಗೆ ಮಾಹಿತಿ ಯನ್ನು ತ್ತಿರದ ಪಶುವೈದ್ಯಕೀಯ ಸಂಸ್ಥೆಗಳು / ಹಾಲು ಉತ್ಪಾದಕರ ಸಹಕಾರಿ ಸಂಘಗಳು / ಗ್ರಾಪಂಗಳನ್ನು ಸಂಪರ್ಕಿಸಿ ಪಡೆಯಬಹುದು.
ಈ ಹಿಂದಿನ ಸುತ್ತುಗಳಲ್ಲಿ ಲಸಿಕೆ ಹಾಕಿಸಿದ್ದರೂ ಸಹ ಮತ್ತೊಮ್ಮೆ ಈ ಸುತ್ತಿನಲ್ಲಿ ಲಸಿಕೆ ಹಾಕಿಸಿ ಸಹಕರಿಸಬೇಕು ಎಂದು ಪಶುಪಾಲನಾ ಇಲಾಖೆಯ ಉಪ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.