×
Ad

ಅತ್ಯಾಚಾರ ಪ್ರಕರಣ: ಆರೋಪಿ ಸೆರೆ

Update: 2019-01-24 22:23 IST

ಕಡಬ, ಜ.24. ಏಳನೇ ತರಗತಿಯ ವಿದ್ಯಾರ್ಥಿನಿಯ‌ ಮೇಲೆ ಅತ್ಯಾಚಾರಗೈದ ಹಿನ್ನೆಲೆಯಲ್ಲಿ ಬಾಲಕಿ ಗರ್ಭಿಣಿಯಾದ ಘಟನೆ ಠಾಣಾ ವ್ಯಾಪ್ತಿಯ ಕೋಡಿಂಬಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಿರುವ ಕಡಬ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಝಾರ್ಖಂಡ್ ಮೂಲದ ಸುಖ್ ರಾಮ್ (35) ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಕುಟುಂಬವೊಂದು ಕೋಡಿಂಬಾಳ ಗ್ರಾಮದ ಎಲಿಯೂರು ಎಂಬಲ್ಲಿ ಕೂಲಿ ಕೆಲಸ ನಿರ್ವಹಿಸಲೆಂದು ಬಂದಿದ್ದು, ಜಾರ್ಖಂಡ್ ಮೂಲದ ಸುಖ್ ರಾಮ್ ತನ್ನ ಕುಟುಂಬದೊಂದಿಗೆ ಅದೇ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದನೆನ್ನಲಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲಿ ಆರೋಪಿಯು ತಮಿಳುನಾಡು ಮೂಲದ ಕುಟುಂಬದ ಬಾಲಕಿಯ ಮೇಲೆ ಅತ್ಯಾಚಾರಗೈದಿದ್ದು, ಬುಧವಾರದಂದು ಬಾಲಕಿ ಅಸ್ವಸ್ಥಳಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತೆರಳಿದಾಗ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ಬಾಲಕಿಯ ಹೆತ್ತವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News