×
Ad

ಐತಿಹಾಸಿಕ ನಗರ ಬಾರಕೂರನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ದಿ

Update: 2019-01-25 21:33 IST

ಉಡುಪಿ, ಜ.25: ಉಡುಪಿ ಜಿಲ್ಲೆಗೆ ಹೆಚ್ಚು ಹೆಚ್ಚು ಪ್ರವಾಸಿಗರನ್ನು ಸೆಳೆ ಯುವ ಕೆಲಸ ಮಾಡಬೇಕು. ಬಾರಕೂರು ಪ್ರದೇಶವನ್ನು ಪ್ರವಾಸೋದ್ಯಮ ತಾಣವಾಗಿ ಮಾಡಲು ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಈಗಾಗಲೇ ಈ ಕುರಿತು ಸರಕಾರದ ಗಮನ ಸೆಳೆಯಲಾಗಿದೆ. ಇದರ ಹಿಂದೆ ನನ್ನ ಉಸಿರು ಕೂಡ ಕೆಲಸ ಮಾಡುತ್ತದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಬಾರ ಕೂರು ಕೋಟೆಯಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಆಳುಪೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಬಾರಕೂರನ್ನು ಪ್ರವಾಸಿ ತಾಣವಾಗಿ ಮಾಡಿದಾಗ ಆಳುಪೋತ್ಸವವನ್ನು ಶಾಶ್ವತವಾಗಿ ಮಾಡಬಹುದಾಗಿದೆ. ಈ ಮೂಲಕ ತುಳುನಾಡನ್ನು 11ನೆ ಶತ ಮಾನದಿಂದ 14ನೆ ಶತಮಾನದವರೆಗೆ ಒಟ್ಟು ಸಾವಿರ ವರ್ಷಗಳ ಕಾಲ ಆಳ್ವಿಕೆ ನಡೆಸಿದ ಆಳುಪರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.

ಅದ್ಭುತವಾದ ಬೀಚ್, ಪ್ರಕೃತಿ, ದೇವಸ್ಥಾನಗಳು ಸೇರಿದಂತೆ ಹಲವು ಪ್ರವಾಸಿ ತಾಣವನ್ನು ಹೊಂದಿರುವ ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ. ನಮ್ಮ ಮಕ್ಕಳಿಗೆ ಈ ಮೂಲಕ ಹೆಚ್ಚು ಹೆಚ್ಚು ಉದ್ಯೋಗ ಕಲ್ಪಿಸುವ ಕೆಲಸ ಮಾಡಬೇಕಾಗಿದೆ. ಅದಕ್ಕಾಗಿ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಆಳುಪೋತ್ಸವವನ್ನು ಪ್ರತಿವರ್ಷ ಇಲಾಖೆ ಯಿಂದ ಯೋಜನಾಬದ್ದವಾಗಿ ಮಾಡಬೇಕು. ಅದಕ್ಕೆ ಯಾವುದೇ ಹಣದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಈ ಮೂಲಕ ಬಾರಕೂರು ಪರಂಪರೆ ವ್ಯವಸ್ಥೆಗೆ ಗೌರವ ಸಿಗಬೇಕು ಎಂದು ಹೇಳಿದರು.

ಬಾರಕೂರು ಸಂಸ್ಥಾನದ ಡಾ.ಸಂತೋಷ ಭಾರತಿ ಗುರೂಜಿ ಶುಭಾಶಂಸನೆ ಗೈದರು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಅಧ್ಯಕ್ಷ ಮನೋಹರ್ ಶೆಟ್ಟಿ, ಜಿಪಂ ಸದಸ್ಯ ಸುಧಾಕರ್ ಶೆಟ್ಟಿ, ಬಾರಕೂರು ಗ್ರಾಪಂ ಅಧ್ಯಕ್ಷೆ ಶೈಲಜಾ ಡಿಸೋಜ, ಯಡ್ತಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಬಾರಕೂರು ಚರ್ಚ್‌ನ ಧರ್ಮಗುರು ಫಾ.ಪಿಲಿಫ್ ಮೇರಿ ಅರಾನ್ಹ, ಬಾರಕೂರು ಮಸೀದಿ ಧರ್ಮಗುರು ಮೌಲಾನ ಮುಹಮ್ಮದ್ ರಫೀಕ್, ಬಾರಕೂರು ಶಾಂತರಾಮ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಜಿಪಂ ಸಿಇಓ ಸಿಂಧು ರೂಪೇಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆಳುಪೋತ್ಸವ ವಿಶೇಷ ಅಂಚೆ ಲಕೋಟೆಯನ್ನು ಬಿಡು ಗಡೆಗೊಳಿಸಲಾಯಿತು. ಬಾರಕೂರು ಪ್ರದೇಶವನ್ನು ಪ್ರವಾಸೋದ್ಯಮ ತಾಣ ವಾಗಿ ಅಭಿವೃದ್ಧಿ ಪಡಿಸುವಂತೆ ಗ್ರಾಮಸ್ಥರು ಸಚಿವರಿಗೆ ಮನವಿ ಸಲ್ಲಿಸಿದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ವಾಗತಿಸಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ಭಾಸ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ವಂದಿಸಿದರು. ಗಣೇಶ್ ಪ್ರಸಾದ್ ಬೆಂಗಳೂರು ಕಾರ್ಯಕ್ರಮ ನಿರೂಪಿದರು.

ಹೆರಿಟೇಜ್ ವಾಕ್

ಆಳುಪೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ಹೆರಿಟೇಜ್ ವಾಕ್‌ಗೆ ಸಚಿವ ಜಯಮಾಲಾ ಬಾರಕೂರಿನ ಐತಿಹಾಸಿಕ ಸ್ಥಳ ಸಿಂಹಾಸನ ಗುಡ್ಡೆಯಲ್ಲಿ ಚಾಲನೆ ನೀಡಿದರು. ಬಳಿಕ ವಿವಿಧ ಜಾನಪದ ತಂಡಗಳನ್ನೊಳಗೊಂಡ ಶೋಭಾಯಾತ್ರೆಯು ಬಾರಕೂರು ಕೋಟೆವರೆಗೆ ಸಾಗಿ ಬಂತು.

ಇದೇ ಸಂದರ್ಭದಲ್ಲಿ ಸಚಿವರು ಹೆರಿಟೇಜ್ ವಾಕ್ ಆಂಡ್ರಾಯಿಡ್ ಆ್ಯಪ್‌ನ್ನು ಬಿಡುಗಡೆಗೊಳಿಸಿದರು. ಬಾರಕೂರು ಕೋಟೆಯಲ್ಲಿ ಹಮ್ಮಿಕೊಳ್ಳ ಲಾದ ಫಲಪುಷ್ಪ ಪ್ರದರ್ಶನಕ್ಕೆ ಸಚಿವರು ಚಾಲನೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News