×
Ad

ಚಂದ್ರಶೇಖರ ಸ್ವಾಮೀಜಿಯವರಿಂದ ರಾಜೇಂದ್ರ ಕುಮಾರ್ ರಿಗೆ ಸನ್ಮಾನ

Update: 2019-01-25 22:29 IST

ಮಂಗಳೂರು, ಜ. 25: ಪ್ರಸಿದ್ಧ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಶುಕ್ರವಾರ ಭೇಟಿ ನೀಡಿದರು. ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರು ಪ್ರಥಮ ಬಾರಿಗೆ ಬ್ಯಾಂಕಿಗೆ ಆಗಮಿಸಿದ ಶ್ರೀ ಚಂದ್ರಶೇಖರ ಸ್ವಾಮೀಜಿಯವರನ್ನು ಸ್ವಾಗತಿಸಿ ಬ್ಯಾಂಕಿನ ಪರವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಶ್ರೀ ಚಂದ್ರಶೇಖರ ಸ್ವಾಮೀಜಿಯವರು, ಡಾ. ಎಂ.ಎನ್.ರಾಜೇಂದ್ರಕುಮಾರ್ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾಗಿ 25 ವರ್ಷಗಳ ಸಾರ್ಥಕ ಸೇವೆಯ ರಜತ ಸಂಭ್ರಮವನ್ನು ಆಚರಿಸಿದ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‍ಪಾಲ್ ಸುವರ್ಣ, ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಭಾಸ್ಕರ್ ಎಸ್ ಕೋಟ್ಯಾನ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಕೆ.ಎಸ್ ದೇವರಾಜ್, ಶಶಿಕುಮಾರ್ ರೈ ಬಾಲ್ಯೋಟ್ಟು, ಸದಾಶಿವ ಉಳ್ಳಾಲ್ ಹಾಗೂ ಪಡುಬಿದ್ರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವೈ.ಸುಧೀರ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News