×
Ad

ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ: ಆರೋಪಿಯ ಜಾಮೀನು ಅರ್ಜಿ ವಜಾ

Update: 2019-01-25 23:00 IST

ಬೆಂಗಳೂರು, ಜ.25: ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಾಸಿಮ್ ಅಹಮದ್ ಜಾಮೀನು ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ 3 ತಿಂಗಳ ಕಾಲ ಜಾಮೀನು ನೀಡುವಂತೆ ಆರೋಪಿ ವಾಸಿಮ್ ಮನವಿ ಮಾಡಿದ್ದರು. ಆದರೆ ಇದಕ್ಕೆ ಎನ್‌ಐಎ ಆಕ್ಷೇಪ ವ್ಯಕ್ತಪಡಿಸಿತ್ತು. ಇದನ್ನು ಮಾನ್ಯ ಮಾಡಿದ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಪ್ರಕರಣದ ಹಿನ್ನೆಲೆ: 2016ರ ಅಕ್ಟೋಬರ್ 16ರಂದು ಶಿವಾಜಿ ನಗರದ ಕಾಮರಾಜ ರಸ್ತೆಯ ಶ್ರೀನಿವಾಸ ಮೆಡಿಕಲ್ ಸ್ಟೋರ್ ಎದುರು ಸ್ನೇಹಿತರ ಜತೆ ನಿಂತಿದ್ದ ರುದ್ರೇಶ್‌ನನ್ನು 2 ಬೈಕ್‌ಗಳಲ್ಲಿ ಬಂದ ನಾಲ್ವರು ಹತ್ಯೆ ಮಾಡಿ ಪರಾರಿಯಾಗಿದ್ದರು. ಬಳಿಕ ಶಿವಾಜಿನಗರ ಪೊಲೀಸರು ತನಿಖೆ ನಡೆಸಿದ್ದರು. ಆನಂತರ ಪ್ರಕರಣದ ತನಿಖೆ ನಡೆಸಿದ ಎನ್‌ಐಎ ವಾಸಿಮ್ ಅಹಮದ್ ಸೇರಿದಂತೆ ಹಲವರನ್ನು ಬಂಧಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News