×
Ad

ಗುರುಗ್ರಾಮ ಕಟ್ಟಡ ಕುಸಿತ ಪ್ರಕರಣ 7 ಮೃತದೇಹ ಪತ್ತೆ ; ರಕ್ಷಣಾ ಕಾರ್ಯಾಚರಣೆ ಅಂತ್ಯ

Update: 2019-01-25 23:23 IST

ಚಂಡಿಗಢ, ಜ.25: ಹರ್ಯಾಣದ ಗುರುಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಸಂಭವಿಸಿದ ದುರಂತ ಸ್ಥಳದಲ್ಲಿ ನಡೆಯುತ್ತಿದ್ದ ರಕ್ಷಣಾ ಕಾರ್ಯಾಚರಣೆಯನ್ನು ಅಂತ್ಯಗೊಳಿಸಲಾಗಿದ್ದು 7 ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿಶಾಮಕ ದಳ, ಜಿಲ್ಲಾಡಳಿತ, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ 300ಕ್ಕೂ ಅಧಿಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದರು. ಗುರುವಾರ ರಾತ್ರಿ ಅವಶೇಷಗಳ ಅಡಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಸಂಪೂರ್ಣ ಶೋಧನೆ ನಡೆಸಿದ ಬಳಿಕ ರಕ್ಷಣಾ ಕಾರ್ಯಾಚರಣೆಯನ್ನು ಶುಕ್ರವಾರ ಬೆಳಿಗ್ಗೆ ಅಂತ್ಯಗೊಳಿಸಲಾಗಿದೆ .ಮೃತಪಟ್ಟವರಲ್ಲಿ ಐವರ ಗುರುತು ಪತ್ತೆಯಾಗಿದೆ . ಕಟ್ಟಡದ ಮಾಲಕ ದಯಾರಾಮ್ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ಮಟ್ಟದ ತನಿಖೆಗೆ ಆದೇಶಿಸಿರುವುದಾಗಿ ಗುರುಗ್ರಾಮ ಪೊಲೀಸ್ ವಕ್ತಾರ ಸುಭಾಷ್ ಬೋಕನ್ ಹೇಳಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ ತಲಾ 3 ಲಕ್ಷ ರೂ. ಪರಿಹಾರವನ್ನು ಹರ್ಯಾಣ ಸರಕಾರ ಘೋಷಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News