ಭಾರತ ರತ್ನ, ಪದ್ಮ ಪ್ರಶಸ್ತಿಗೆ ಆಯ್ಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿನಂದನೆ

Update: 2019-01-25 18:20 GMT

ಬೆಂಗಳೂರು, ಜ25: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಕೆಲವು ಸಾಧಕರಿಗೆ ಮರಣೋತ್ತರವಾಗಿಯದರೂ ಈ ಪ್ರಶಸ್ತಿಗಳು ಘೋಷಣೆ ಯಾಗಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯದ ವಿಜ್ಞಾನಿ ರೋಹಿಣಿ ಗೋಡ್ಬೋಲೆ, ಸಂಗೀತ ವಿದ್ವಾಂಸ ಪಂ.ರಾಜೀವ್ ತಾರಾನಾಥ, ಸಾಲುಮರದ ತಿಮ್ಮಕ್ಕನವರಿಗೆ ಪದ್ಮಶ್ರೀ ಪ್ರಶಸ್ತಿ ಒಲಿದಿರುವುದು ಸಂತಸ ತಂದಿದೆ. ಆದರೆ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಹಾಗೂ ಇನ್ನೂ ಹಲವು ಅರ್ಹ ಸಾಧಕರಿಗೆ ಪದ್ಮ ಪ್ರಶಸ್ತಿ ನಿರೀಕ್ಷಿಸಿದ್ದೆವು. ಇದು ಕೈಗೂಡದಿರುವುದು ನಿರಾಸೆ ತಂದಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News