ಹುಬ್ಬಳ್ಳಿ: ಎನ್ಆರ್ ಟಿ, ಶುಲ್ಕ ಏರಿಕೆ ಖಂಡಿಸಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

Update: 2019-01-25 18:38 GMT

ಹುಬ್ಬಳ್ಳಿ, ಜ.25: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿನ ಎನ್.ಆರ್.ಟಿ ಹಾಗೂ ಶುಲ್ಕ ಏರಿಕೆಯನ್ನು ಖಂಡಿಸಿ ಎಐಡಿಎಸ್ಒ ನೇತೃತ್ವದಲ್ಲಿ ಇಂದು ನಗರದ ಮಿನಿ ವಿಧಾನಸೌಧದ ಎದುರು ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವೈದ್ಯಕೀಯ ಶಿಕ್ಷಣಕ್ಕೆ ಆರ್ಥಿಕ ಸ್ಥಿತಿ ಉತ್ತಮ ಇರುವ ವಿದ್ಯಾರ್ಥಿಗಳು ಬರುತ್ತಾರೆ ಎನ್ನುವ ಸರ್ಕಾರದ ಕಲ್ಪನೆ ತಪ್ಪಾಗಿದೆ. ವೈದ್ಯಕೀಯ ಶಿಕ್ಷಣಕ್ಕೆ ಸುಮಾರು ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದವರು ಇದ್ದಾರೆ. ಈ ಹಿನ್ನಲೆಯಲ್ಲಿ ಎನ್.ಆರ್.ಟಿ ಹಾಗೂ ಶುಲ್ಕ ಏರಿಕೆ ಖಂಡನೀಯವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಶೀಘ್ರವೇ ಶುಲ್ಕ ಏರಿಕೆ ಹಾಗೂ ಎನ್.ಆರ್.ಟಿ ಬಗ್ಗೆ ಸೂಕ್ತ ಕ್ರಮ ಜಾರಿಗೊಳಿಸಿ ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಬೇಕು ಎಂದು ಒತ್ತಾಯಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News