ಒಸಾಕಾ ನೂತನ ಆಸ್ಟ್ರೇಲಿಯನ್ ಓಪನ್ ಚಾಂಪಿಯನ್

Update: 2019-01-26 12:02 GMT

ಮೆಲ್ಬೋರ್ನ್, ಜ.26: ಜಪಾನ್ ಆಟಗಾರ್ತಿ ನವೊಮಿ ಒಸಾಕಾ ಆಸ್ಟ್ರೇಲಿಯನ್ ಓಪನ್‌ನ ಮಹಿಳೆಯರ ಸಿಂಗಲ್ಸ್‌ನ ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

ಶನಿವಾರ ಇಲ್ಲಿ ನಡೆದ ಫೈನಲ್ ಫೈಟ್‌ನಲ್ಲಿ 21ರ ಹರೆಯದ ಒಸಾಕಾ ಝೆಕ್ ಆಟಗಾರ್ತಿ ಪೆಟ್ರಾ ಕ್ವಿಟೋವಾರನ್ನು 7-6(2), 5-7, 6-4 ಸೆಟ್‌ಗಳ ಅಂತರದಿಂದ ಮಣಿಸಿದರು. ಈ ಗೆಲುವಿನ ಮೂಲಕ ಸತತ ಎರಡನೇ ಗ್ರಾನ್‌ಸ್ಲಾಮ್ ಪ್ರಶಸ್ತಿ ಮುಡಿಗೇರಿಸಿಕೊಂಡರು.

ಒಸಾಕಾ ಆಸ್ಟ್ರೇಲಿಯನ್ ಓಪನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಜಯಿಸುವ ಜೊತೆಗೆ ವಿಶ್ವ ಮಹಿಳಾ ಟೆನಿಸ್ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಈ ಸಾಧನೆ ಮಾಡಿದ ಜಪಾನ್‌ನ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಒಸಾಕಾ ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಫೈನಲ್‌ನಲ್ಲಿ ಹಿರಿಯ ಆಟಗಾರ್ತಿ ಸೆರೆನಾ ವಿಲಿಯಮ್ಸ್‌ಗೆ ಶಾಕ್ ನೀಡಿ ಚೊಚ್ಚಲ ಗ್ರಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದ್ದರು.

ಒಸಾಕಾ 2014-15ರ ಬಳಿಕ ಸತತ ಎರಡು ಪ್ರಮುಖ ಚಾಂಪಿಯನ್‌ಶಿಪನ್ನು ಜಯಿಸಿದ ಮೊದಲ ಆಟಗಾರ್ತಿ ಎನಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News