ಮಂಗಳೂರು: ಶಕ್ತಿ ಕಾಲೇಜಿನಲ್ಲಿ ಗಣರಾಜೋತ್ಸವ
ಮಂಗಳೂರು, ಜ.26: ಶಕ್ತಿನಗರದ ಶಕ್ತಿ ವಸತಿ ಶಾಲೆ ಹಾಗೂ ಶಕ್ತಿ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವವನ್ನು ಶನಿವಾರ ಆಚರಿಸಲಾಯಿತು.
ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮತನಾಡಿದ ಬೆಸೆಂಟ್ ಸಂಸ್ಥೆಗಳ ಆಡಳಿತ ಮಂಡಳಿ ವಿಮೆನ್ಸ್ ನ್ಯಾಶನಲ್ ಎಜ್ಯುಕೇಶನ್ ಸೊಸೈಟಿಯ ಶೈಕ್ಷಣಿಕ ಸಲಹೆಗಾರರಾದ ಲಲಿತಾ ಮಲ್ಯ, ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಕಾನೂನು, ನೀತಿ, ನಿಯಮಗಳನ್ನು ಚಾಚೂ ತಪ್ಪದೇ ಭಾಗವಹಿಸಬೇಕು. ತಾನು ದೇಶದ ಪ್ರಗತಿಗೆ ಹೇಗೆ ಸಹಕಾರಿಯಾಗಬೇಕೆಂಬುದರ ಕುರಿತಾಗಿ ಕ್ಷಣ ಕ್ಷಣವೂ ಯೋಚಿಸಿಬೇಕು. ವಿಶಾಲ ದೇಶವನ್ನು ತೆಗೆದುಕೊಂಡಾಗ ವ್ಯಕ್ತಿ ಮುಖ್ಯ ಅಲ್ಲ, ಸಮಷ್ಠಿಯೇ ಮುಖ್ಯ ಎಂಬುದನ್ನು ನಾವು ತಿಳಿದುಕೊಳ್ಳಬೇಕು ಎಂದರು.
ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ. ನಾಕ್ ಧ್ವಜಾರೋಹಣಗೈದರು. ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್. ಸ್ವಾಗತಿಸಿದರು. ಶಾಲಾ ಪ್ರಾಂಶುಪಾಲೆ ವಿದ್ಯಾ ಜಿ.ಕಾಮತ್ ಪ್ರಸ್ತಾವನೆಗೈದರು.
ಶಕ್ತಿ ಎಜುಕೇಶನ್ ಟ್ರಸ್ಟಿನ ಟ್ರಸ್ಟಿ ಡಾ.ಮುರಳೀಧರ ನಾಕ್, ಸಂಸ್ಥೆಯ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಅಭಿವೃದ್ಧಿ ಅಧಿಕಾರಿ ನಸೀಮಾ ಬಾನು, ಪ್ರಧಾನ ಸಲಹೆಗಾರ ರಮೇಶ್ ಕೆ., ಗೋಪಾಲಕೃಷ್ಣ ಪ್ರಿ-ಸ್ಕೂಲಿನ ಮುಖ್ಯಸ್ಥೆ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಉಪನ್ಯಾಸಕಿ ಶಿಲ್ಪಾನಿರೂಪಿಸಿದರು. ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತ ಪಡಿಸಿದರು.