ಶಿವಾಜಿನಗರ ಠಾಣೆಯ ಎಎಸ್ಸೈ ನೇಣುಬಿಗಿದು ಆತ್ಮಹತ್ಯೆ

Update: 2019-01-26 17:18 GMT

ಬೆಂಗಳೂರು, ಜ.26: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಾಜಿನಗರ ಠಾಣೆಯ ಸಹಾಯಕ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ರಾಮಸೋಮಪ್ಪ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಿವಾಜಿನಗರದ ಪೊಲೀಸ್ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ರಾಮಸೋಮಪ್ಪ (58) ಅವರು ಶುಕ್ರವಾರ ಪತ್ನಿಯನ್ನು ಹೊರಗೆ ಕಳುಹಿಸಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಮಸೋಮಪ್ಪ ಅವರಿಗೆ ಇಬ್ಬರು ಮಕ್ಕಳಿದ್ದು, ಕಿಡ್ನಿ ಸಮಸ್ಯೆ ಮತ್ತು ಇನ್ನಿತರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ಕೆಲವು ದಿನಗಳಿಂದ ರಜೆಯ ಮೇಲೆ ತೆರಳಿದ್ದರು. ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದ ಅವರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಶಿವಾಜಿನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಅಗಲಿದ ಸಹೋದ್ಯೋಗಿಗೆ ಶಿವಾಜಿನಗರ ಪೊಲೀಸರು ಕಂಬನಿ ಮಿಡಿದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News